HomeLatest NewsBREAKING: ಕುಟುಂಬ ಸಮೇತ ಜಾತ್ರೆಗೆ ಹೋದಾಗಲೇ ಮನೆಗೆ ಬೆಂಕಿ ಹಚ್ಚಿದ ಯುವಕ: ಪರಿಸ್ಥಿತಿ ಉದ್ವಿಗ್ನ

BREAKING: ಕುಟುಂಬ ಸಮೇತ ಜಾತ್ರೆಗೆ ಹೋದಾಗಲೇ ಮನೆಗೆ ಬೆಂಕಿ ಹಚ್ಚಿದ ಯುವಕ: ಪರಿಸ್ಥಿತಿ ಉದ್ವಿಗ್ನ

ಕಾರವಾರ: ಕುಟುಂಬ ಸಮೇತ ಜಾತ್ರೆಗೆ ತೆರಳಿದಾಗ ಯುವಕ ಮನೆಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ನಡೆದಿದೆ.

ದಿನಕರ್ ಎಂಬುವರ ಮನೆಗೆ ಬೆಂಕಿ ಹಚ್ಚಲಾಗಿದೆ. ದಿನಕರ್ ಕುಟುಂಬದವರು ಕುಮಟಾದ ವೆಂಕಟರಮಣ ಜಾತ್ರೆಗೆ ತೆರಳಿದ್ದ ವೇಳೆ ಫೈಸಾನ್ ಜಾಫರ್ ಶೇಖ್(18) ಮನೆಗೆ ಬೆಂಕಿ ಹಚ್ಚಿದ್ದಾನೆ. ಕೂಡಲೇ ಅಕ್ಕಪಕ್ಕದ ಮನೆಯವರು ಬೆಂಕಿಯನ್ನು ನಂದಿಸಿದ್ದಾರೆ. ಆರೋಪಿಯನ್ನು ಕುಮಟಾ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆಯ ನಂತರ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಎಸ್‌ಪಿ ದೀಪನ್, ಅಡಿಷನಲ್ ಎಸ್ಪಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆ ಮಾಲೀಕ ದಿನಕರ್ ಕುಟುಂಬಕ್ಕೆ ಪೋಲೀಸ್ ಭದ್ರತೆ ಒದಗಿಸಲಾಗಿದೆ. ಅಹಿತಕರ ಘಟನೆ ನಡೆದಂತೆ ದೇವರಹಕ್ಕಲ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular