HomeLatest NewsBIG NEWS : ಡಿಸಿಎಂ 'ಅಜಿತ್ ಪವಾರ್' ದುರ್ಮರಣ : CM ಸಿದ್ದರಾಮಯ್ಯ ಸೇರಿ...

BIG NEWS : ಡಿಸಿಎಂ ‘ಅಜಿತ್ ಪವಾರ್’ ದುರ್ಮರಣ : CM ಸಿದ್ದರಾಮಯ್ಯ ಸೇರಿ ಹಲವು ಗಣ್ಯರಿಂದ ಸಂತಾಪ.!

ಬೆಂಗಳೂರು : ಇಂದು ಬುಧವಾರ (ಜನವರಿ 28, 2026 ) ರಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಅವರು ನಿಧನರಾಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ದೃಢಪಡಿಸಿವೆ.

ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಲಿಯರ್ಜೆಟ್ 45 (Learjet 45) ಸಣ್ಣ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ತಾಂತ್ರಿಕ ತೊಂದರೆಯಿಂದ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ಅಜಿತ್ ಪವಾರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆಶಿ, ಹೆಚ್ ಡಿ ಕುಮಾರಸ್ವಾಮಿ, ಬಿ.ವೈ ವಿಜಯೇಂದ್ರ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್
‘ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಅವರ ನಿಧನವು ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರು, ಸಹೋದ್ಯೋಗಿಗಳು ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಪ್ರೀತಿಪಾತ್ರರಿಗೆ ಈ ಭರಿಸಲಾಗದ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ಭಗವಂತ ನೀಡಲಿ ‘ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಸಂತಾಪ

ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದರು ಎಂಬ ವಾರ್ತೆ ತಿಳಿದು ತೀವ್ರ ಆಘಾತ ಉಂಟಾಯಿತು. ಮಹಾರಾಷ್ಟ್ರದ ಪ್ರಭಾವೀ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಸುನೇತ್ರಾ ಪವಾರ್ ಅವರು, ಸುಪುತ್ರ ಶ್ರೀ ಪಾರ್ಥ್ ಪವಾರ್ ಅವರು ಮತ್ತು ಇಡೀ ಕುಟುಂಬಕ್ಕೆ, ಪವಾರ್ ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರೆಲ್ಲರಿಗೂ ನೀಡಲಿ ಎಂದು ಹೆಚ್. ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ಆಳವಾದ ನೋವುಂಟಾಗಿದೆ. ಅವರ ಹಠಾತ್ ನಿಧನವು ಸಾರ್ವಜನಿಕ ಜೀವನಕ್ಕೆ ಮತ್ತು ದೃಢ ಸಂಕಲ್ಪ ಹಾಗೂ ಅನುಭವದೊಂದಿಗೆ ಅವರು ಸೇವೆ ಸಲ್ಲಿಸಿದ ಮಹಾರಾಷ್ಟ್ರ ರಾಜಕಾರಣಕ್ಕೆ ದೊಡ್ಡ ನಷ್ಟವಾಗಿದೆ.ಅವರ ಕುಟುಂಬ ಸದಸ್ಯರಿಗೆ ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ದುಃಖದ ಸಮಯದಲ್ಲಿ ಅವರಿಗೆ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.” ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular