HomeLatest Newsಸಾವಿನಲ್ಲೂ ಒಂದಾದ ಸಹೋದರರು: ಅಣ್ಣನ ಅಂತ್ಯಕ್ರಿಯೆ ಮುಗಿದ ಮರುದಿನವೇ ತಮ್ಮನೂ ಕೊನೆಯುಸಿರು

ಸಾವಿನಲ್ಲೂ ಒಂದಾದ ಸಹೋದರರು: ಅಣ್ಣನ ಅಂತ್ಯಕ್ರಿಯೆ ಮುಗಿದ ಮರುದಿನವೇ ತಮ್ಮನೂ ಕೊನೆಯುಸಿರು

ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಸಹೋದರರು ಸಾವಿನಲ್ಲಿಯೂ ಒಂದಾಗಿದ್ದಾರೆ.

ಅಣ್ಣನ ಅಂತ್ಯಕ್ರಿಯೆ ಮುಗಿದ ಮರುದಿನವೇ ತಮ್ಮನೂ ಕೊನೆಯುಸಿರೆಳೆದಿದ್ದಾರೆ. ಜನವರಿ 20ರಂದು ಬಸವಂತರಾಯ್ ಸಣ್ಣಕ್(81) ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ಮುಗಿದ ಮರುದಿನ ತಮ್ಮ ಶಿವರಾಯ್ ಸಣ್ಣಕ್(79) ಅವರೂ ಮೃತಪಟ್ಟಿದ್ದಾರೆ.

ಅಣ್ಣನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಶಿವರಾಯ್ ಹಾಸಿಗೆ ಹಿಡಿದಿದ್ದರು. ಅಣ್ಣನ ಸಾವಿನ ನೋವಿನಿಂದ ಆಘಾತಕ್ಕೆ ಒಳಗಾಗಿ ಇಹಲೋಕ ತ್ಯಜಿಸಿದ್ದಾರೆ. ಹಿರಿಯ ಸಹೋದರರಿಬ್ಬರ ಬಾಂಧವ್ಯ ನೆನೆದು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular