HomeLatest News60 ವರ್ಷ ಮೇಲ್ಪಟ್ಟವರಿಗೆ ತಿಂಗಳಿಗೆ 3 ಸಾವಿರ ರೂ.: ‘ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ’ಗೆ...

60 ವರ್ಷ ಮೇಲ್ಪಟ್ಟವರಿಗೆ ತಿಂಗಳಿಗೆ 3 ಸಾವಿರ ರೂ.: ‘ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ’ಗೆ ಅರ್ಜಿ   

ಕೇಂದ್ರ ಪುರಸ್ಕೃತ ಯೋಜನೆ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್(ಪಿಎಂ-ಎಸ್‌ವೈಎಂ) ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3,000 ರೂ. ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ.

ಮಹಾನಗರಪಾಲಿಕೆ ವ್ಯಾಪ್ತಿಯ ನೋಂದಾಯಿತ ಡೇ-ನಲ್ಮ್ ಯೋಜನೆಯ ಉಪಘಟಕಗಳಾದ ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಪಿಎಂ ಸ್ವ-ನಿಧಿ ಯೋಜನೆಯ ಬೀದಿ ಬದಿ ವ್ಯಾಪಾರಿಗಳು ಹಾಗೂ ಅವರ ಕುಟುಂಬಸ್ಥರು 8 ರಿಂದ 40 ವಯಸ್ಸಿನ ಒಳಗಿರುವ ಮತ್ತು ಅವರ ಮಾಸಿಕ 15,000 ರೂ. ಆದಾಯ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ತೆರಿಗೆ, ಬಿಎಸ್‌ಐ, ಪಿ.ಎಸ್, ಎನ್.ಪಿ.ಎಸ್. ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು ಅಂತಹ ಫಲಾನುಭವಿಗಳು ಅಗತ್ಯ ದಾಖಲೆಗಳಾದ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ. ಕೋಡ್ ವಿವರವಿರುವ, ಮತ್ತು ತಮ್ಮ ನಾಮ ನಿರ್ದೇಶಿತ ಸದಸ್ಯರ ನೋಂದಾಯಿತ ಆಧಾರ್ ಲಿಂಕ್ ಮೊಬೈಲ್ ಹ್ಯಾಂಡ್ ಸೆಟ್ ನೊಂದಿಗೆ ಮಹಾನಗರಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ಮಹಿಳಾ ಸಮುದಾಯ ಕೇಂದ್ರ, ಡೇ-ನಲ್ಮ್ ಶಾಖೆ, (ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ), ಮಹಾನಗರ ಪಾಲಿಕೆ, ದಾವಣಗೆರೆ ಇಲ್ಲಿಗೆ ಬಂದು ಖುದ್ದಾಗಿ ಅರ್ಜಿ ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಮಹಾನಗರಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ಮಹಿಳಾ ಸಮುದಾಯ ಕೇಂದ್ರ, ಡೇ-ನಲ್ಮ್  ಶಾಖೆಯನ್ನು ಸಂಪರ್ಕಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular