HomeLatest Newsಜಿಬಿಎ ಮಾದರಿಯಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ವ್ಯವಸ್ಥೆ ಜಾರಿ

ಜಿಬಿಎ ಮಾದರಿಯಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ವ್ಯವಸ್ಥೆ ಜಾರಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮಾದರಿಯಲ್ಲೇ ಎಲ್ಲ ಮಹಾನಗರ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹ ವ್ಯವಸ್ಥೆ ಜಾರಿಗೆ ತರಲು ಕ್ರಮ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ವೈ.ಎಂ. ಸತೀಶ್, ಬಳ್ಳಾರಿ ಮಹಾನಗರ ಪಾಲಿಕೆ ಸಿಬ್ಬಂದಿ ಆಸ್ತಿ ಮಾಲೀಕರಿಂದ ಸಂಗ್ರಹಿಸಿದ ತೆರಿಗೆಯನ್ನು ಪಾಲಿಕೆಗೆ ಪಾವತಿಸದೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಲು ಜಿಬಿಎ ಮಾದರಿಯಲ್ಲಿ ತೆರಿಗೆ ಸಂಗ್ರಹ, ಭ್ರಷ್ಟ ಅಧಿಕಾರಿಗಳ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾದರಿಯಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಆಸ್ತಿ ಸಂಗ್ರಹ ವ್ಯವಸ್ಥೆ ಜಾರಿಗೆ ಕ್ರಮ ವಹಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular