ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದರ ಬಗ್ಗೆ ಮಹತ್ವದ ಸಭೆ ನಿಗದಿಯಾಗಿದೆ.
ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು, ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು/ಸಿಬ್ಬಂದಿಗಳೆಲ್ಲರೂ ಖಾದಿ ಉಡುಪನ್ನು ಧರಿಸುವ ಕುರಿತಂತೆ ಚರ್ಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಜ. 29 ರ ಮಧ್ಯಾಹ್ನ 12 ಘಂಟೆಗೆ ಕೊಠಡಿ ಸಂಖ್ಯೆ:320 ವಿಧಾನಸೌಧ ಇಲ್ಲಿ ಸಭೆಯನ್ನು ನಿಗಧಿಪಡಿಸಲಾಗಿದೆ.


