HomeLatest Newsಬೋರ್ ವೆಲ್ ಲಾರಿಗೆ ಬೊಲೆರೋ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಓರ್ವ ಸಾವು, 7 ಮಂದಿ...

ಬೋರ್ ವೆಲ್ ಲಾರಿಗೆ ಬೊಲೆರೋ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಓರ್ವ ಸಾವು, 7 ಮಂದಿ ಗಂಭೀರ

ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಬೋರ್ ವೆಲ್ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿದ್ದು, ಬೊಲೆರೋ ವಾಹನದಲ್ಲಿದ್ದ ಒಬ್ಬರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ 7 ಜನರ ಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ದೋರನಾಳು ಸಮೀಪ ಅಪಘಾತ ಸಂಭವಿಸಿದೆ. ತರೀಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಂದ್ರು(31) ಸಾವನ್ನಪ್ಪಿದ್ದಾರೆ.

ಎಂ.ಸಿ. ಹಳ್ಳಿಯಿಂದ ಬೊಲೆರೋ ವಾಹನದಲ್ಲಿ ಕಲ್ಲತ್ತಗಿರಿಗೆ ತೆರಳಿದ್ದರು. ಕಲ್ಲತಗಿರಿ ದೇವಸ್ಥಾನದಿಂದ ಊರಿಗೆ ಹಿಂತಿರುಗುವಾಗ ದುರ್ಘಟನೆ ಸಂಭವಿಸಿದೆ. ಬೋರ್ ವೆಲ್ ಲಾರಿಗೆ ಡಿಕ್ಕಿಯಾದ ರಭಸಕ್ಕೆ ಬೊಲೆರೋ ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular