HomeSports4ನೇ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 50 ರನ್‌ ಸೋಲು

4ನೇ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 50 ರನ್‌ ಸೋಲು

ಭಾರತ-ನ್ಯೂಜಿಲೆಂಡ್ ತಂಡಗಳ ನಡುವಿನ 4ನೇ ಟಿ-20 ಪಂದ್ಯ ವಿಶಾಖಪಟ್ಟಣದಲ್ಲಿ ಬುಧವಾರ ನಡೆಯಿತು. ಈಗಾಗಲೇ 5 ಪಂದ್ಯಗಳ ಸರಣಿಯಲ್ಲಿ 3-0 ಪಂದ್ಯಗಳನ್ನು ಗೆದ್ದು ವಿಶ್ವಾಸದಲ್ಲಿದ್ದ ಟೀಮ್ ಇಂಡಿಯಾ 4ನೇ ಪಂದ್ಯದಲ್ಲಿ 50 ರನ್‌ಗಳ ಸೋಲು ಅನುಭವಿಸಿದೆ.

 4ನೇ ಟಿ-20 ಪಂದ್ಯದಲ್ಲಿ ಭಾರತ ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ನಾಯಕ ಸೂರ್ಯ ಕುಮಾರ್ ಯಾದವ್ ನೇತೃತ್ವದ ತಂಡದ ಬ್ಯಾಟರ್‌ಗಳು ಉತ್ತಮ ಲಯದಲ್ಲಿದ್ದು, ರನ್ ಹೊಳೆ ಹರಿಸುತ್ತಿದ್ದರು. ಆದರೆ 4ನೇ ಪಂದ್ಯದಲ್ಲಿ ತಂಡ ಆಲ್‌ ಔಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

ಬ್ಯಾಟರ್‌ಗಳು ಉತ್ತಮ ಲಯದಲ್ಲಿದ್ದರು. ಆದ್ದರಿಂದ 4ನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಚೇಸಿಂಗ್ ಆಯ್ಕೆ ಮಾಡಿಕೊಂಡಿತು. ನ್ಯೂಜಿಲೆಂಡ್ 215/7 ರನ್‌ಗಳಿಗುವ ಮೂಲಕ ಭಾರತಕ್ಕೆ 216 ರನ್‌ಗಳ ಸವಾಲಿನ ಗುರಿ ನೀಡಿತು. ನ್ಯೂಜಿಲೆಂಡ್ ಪರ ಡಿವಾನ್ ಕಾನ್ವೆ 44 (23), ಟಿಮ್ ಸೈಫರ್ಟ್ 62 (36), ಡ್ಯಾರಿಲ್ ಮಿಚೆಲ್ 39 * (18) ರನ್ ಬಾರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಿಮ್ ಸೈಫರ್ಟ್ 25 ಎಸೆತದಲ್ಲಿ 62 ರನ್‌ಗಳ ಸ್ಫೋಟಕ ಬ್ಯಾಟಿಂಗ್‌ ಮೂಲಕ ತಂಡ ಬೃಹತ್ ಮೊತ್ತ ಕಲೆ ಹಾಕಲು ನೆರವಾದರು. ಇದು ಭಾರತದ ವಿರುದ್ಧ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಗಳಿಸಿದ ಅತ್ಯಂತ ವೇಗದ ಅರ್ಧಶತಕವಾಗಿದೆ. ಆರಂಭಿಕರಾಗಿ ಕಣಕ್ಕಿಳಿದ ಅವರು ಭಾರತದ ಬೌಲರ್‌ಗಳನ್ನು ದಂಡಿಸಿದರು.

4ನೇ ಪಂದ್ಯಕ್ಕಾಗಿ ಭಾರತ ತಂಡದಲ್ಲಿ 1 ಬದಲಾವಣೆ ಮಾಡಲಾಗಿತ್ತು. ಗಾಯಾಳು ಇಶಾನ್ ಕಿಶನ್ ಬದಲಿಗೆ ಅರ್ಷದೀಪ್ ಸಿಂಗ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು. ಬೌಲಿಂಗ್‌ ವೈಫಲ್ಯ ಅನುಭವಿಸುತ್ತಿರುವ ನ್ಯೂಜಿಲೆಂಡ್ ಈ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿತ್ತು. ಪಂದ್ಯದಲ್ಲಿ ಬೌಲರ್‌ಗಳು ಫಾರ್ಮ್‌ಗೆ ಮರಳಿದ್ದು, ಭಾರತಕ್ಕೆ ಸೋಲಿನ ರುಚಿ ತೋರಿಸಿದ್ದಾರೆ.

ಚೇಸಿಂಗ್‌ನಲ್ಲಿ ಎಡವಿದ ಭಾರತ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದ ಭಾರತ ಚೇಸಿಂಗ್‌ನಲ್ಲಿ ಎಡವಿತು. ಸಂಜು ಸ್ಯಾಮ್ಸನ್ 24, ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ 8, ರಿಂಕು ಸಿಂಗ್ 39, ಶಿವಂ ದುಬೆ 65, ರವಿ ಬಿಷ್ಣೋಯಿ 10 ರನ್‌ಗಳಿಸಿದರು.

ತಂಡದ ಪರವಾದಿ ಶಿವಂ ದುಬೆ ಏಕಾಂಗಿ ಹೋರಾಟ ವ್ಯರ್ಥವಾಯಿತು. ಅವರು 23 ಎಸೆತಗಳಲ್ಲಿ 65 ರನ್ ಬಾರಿಸಿದರು. ರನೌಟ್ ಆಗುವ ಮೂಲಕ ಭಾರತ ಸೋಲೊಪ್ಪಿಕೊಳ್ಳಬೇಕಾಯಿತು. ತಂಡದ ಉಳಿದ ಆಟಗಾರರು ಅಲ್ಪ ಮೊತ್ತಕ್ಕೆ ಔಟ್ ಆಗುವ ಮೂಲಕ 4ನೇ ಪಂದ್ಯ ಗೆಲ್ಲುವ ಆಸೆಗೆ ತಣ್ಣೀರು ಸುರಿದರು.

ಅಂತಿಮವಾಗಿ ಭಾರತ 18.4 ಓವರ್‌ನಲ್ಲಿ 165 ರನ್‌ಗಳಿಗೆ ಆಲ್‌ ಔಟ್ ಆಗುವ ಮೂಲಕ 4ನೇ ಟಿ-20 ಪಂದ್ಯದಲ್ಲಿ ಸೋಲು ಕಂಡಿತು. ಸರಣಿಯಲ್ಲಿ ಇದು ನ್ಯೂಜಿಲೆಂಡ್‌ ತಂಡದ ಮೊದಲ ಗೆಲುವು. ಈಗಾಗಲೇ ಸರಣಿ ಗೆದ್ದಿರುವ ಭಾರತ ಇನ್ನೊಂದು ಪಂದ್ಯವನ್ನು ಆಡಬೇಕಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular