ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ರಾಜ್ಯದ ಯುವಜನತೆಗಾಗಿ ಕೌಶಲ್ಯದೊಂದಿಗೆ ಉದ್ಯೋಗವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಫೆಬ್ರವರಿ 2 ರಂದು ವಿಜಪುರದಲ್ಲಿ ಹಾಗೂ ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಫೆ.2 ರಂದು ವಿಜಯಪುರದ ಸ್ಟೇಷನ್ ರಸ್ತೆಯ ದರಬಾರ ಹೈಸ್ಕೂಲ್ ಆವರಣದಲ್ಲಿ ಯುವ ಸಮೃದ್ಧಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಆಸಕ್ತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಲಿಂಕ್: https://udyogamela.ksdckarnataka.com/ ಬಳಸಿ ನೋಂದಣಿ ಮಾಡಿಕೊಳ್ಳಬೇಕು.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ರಾಯಚೂರು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDUGKY) ಇವರುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 6 ರಂದು ರಾಯಚೂರಿನ ಕೃಷಿ ಮಹಾವಿದ್ಯಾಲಯ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ವನ್ನು ಆಯೋಜಿಸಲಾಗಿದೆ. ಆಸಕ್ತರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮೇಳದ ನೋಂದಣಿ ಲಿಂಕ್ : https://forms.mynoukri.com/raichurcandidate ಬಳಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

