ಬೆಂಗಳೂರು: 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಲೆ ಇನ್ಸ್ ಪೆಕ್ಟರ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೈಸೂರು ರಸ್ತೆಯ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪೊಲೀಸ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕೆ.ಪಿ.ಅಗ್ರಹಾರ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ಬಂಧಿತ ಇನ್ಸ್ ಪೆಕ್ಟರ್.
ಚೀಟಿ ವ್ಯವಹಾರ ಕೇಸ್ ಗೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್ ಪೆಕ್ಟರ್ ಗೋವಿಂದರಾಜುನನ್ನು ವಶಕ್ಕೆ ಪಡೆಯಲಾಗಿದೆ.
ಚೀಟಿ ಕೇಸ್ ನಲ್ಲಿ ವ್ಯಕ್ತಿಯೊಬ್ಬರನ್ನು ಹೆದರಿಸಿ ಲಂಚಕ್ಕೆ ಬೇದಿಕೆ ಇಟ್ಟಿದ್ದ ಇನ್ಸ್ ಪೆಕ್ಟರ್ ಗೋವಿಂದರಾಜು ಸದ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

