HomeLatest NewsBREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬೈಕ್ ಸವಾರನ ದೇಹ ಛಿದ್ರ ಛಿದ್ರ

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬೈಕ್ ಸವಾರನ ದೇಹ ಛಿದ್ರ ಛಿದ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪಘಾತಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದೆ. ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ದೇಹ ಛಿದ್ರ ಛಿದ್ರಗೊಂಡಿದೆ. ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಮೃತ ಬೈಕ್ ಸವಾರ ಹೊರ ರಾಜ್ಯದವನೆಂದು ತಿಳಿದುಬಂದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular