ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ಅವರ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಅಂತಹ ಹೇಳಿಕೆ ನೀಡದಂತೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿರ್ಬಂಧ ವಿಧಿಸಲಾಗಿದೆ.
ಬೆಂಗಳೂರಿನ 27ನೇ ಸಿಟಿ ಸಿವಿಲ್ ಕೋರ್ಟ್ ನಿಂದ ಈ ಕುರಿತಾಗಿ ಮಧ್ಯಂತರ ಆದೇಶ ನೀಡಲಾಗಿದೆ. ಶಾಸಕ ಯತ್ನಾಳ್ ಅವರು ಸುಳ್ಳು ನಿಂದನೆಯ ಆರೋಪ ಮಾಡುತ್ತಿದ್ದಾರೆ ಎಂದು ಶಿವಾನಂದ ಪಾಟೀಲ್ ಪರ ವಕೀಲರಾದ ವಿಜೇತಾ ಆರ್. ನಾಯ್ಕ ವಾದ ಮಂಡಿಸಿದರು. ವಾದ ಆಲಿಸಿದ ಕೋರ್ಟ್ ಮಾನಹಾನಿಕರ ಹೇಳಿಕೆ ನೀಡದಂತೆ ಮಧ್ಯಂತರ ನಿರ್ಬಂಧಕಾಜ್ಞೆಯನ್ನು ನೀಡಿದೆ.

