HomeLatest Newsಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಸದನದಲ್ಲಿ ಗಮನಸೆಳೆದ ಶಾಸಕ ಯತ್ನಾಳ್: ಪತ್ತೆಗೆ ವಿಶೇಷ ತಂಡ ರಚನೆ...

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಸದನದಲ್ಲಿ ಗಮನಸೆಳೆದ ಶಾಸಕ ಯತ್ನಾಳ್: ಪತ್ತೆಗೆ ವಿಶೇಷ ತಂಡ ರಚನೆ ಭರವಸೆ

ಬೆಂಗಳೂರು: ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಮನ ಸೆಳೆದಿದ್ದಾರೆ.

ರಾಜ್ಯದಲ್ಲಿ 25 ಲಕ್ಷ ಅಕ್ರಮ ನುಸುಳುಕೋರರು ಇದ್ದಾರೆ. ನಕಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಮಾಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಭಯಾನಕ ಸ್ಥಿತಿ ಇದೆ ಎಂದು ಯತ್ನಾಳ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ದರೋಡೆ ನಡೆಯಿತು. ಪೊಲೀಸ್ ಇಲಾಖೆ ವಿಫಲವಾಗಿದೆ. ಬಾಂಗ್ಲಾ ನುಸುಳುಕೋರರು ಬರಲು ಏಜೆಂಟರು ನೆರವು ನೀಡುತ್ತಿದ್ದಾರೆ. ಕರ್ನಾಟಕದ ಪರಿಸ್ಥಿತಿ ಪಶ್ಚಿಮ ಬಂಗಾಳದಂತೆ ಆಗುತ್ತದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ರಕ್ಷಣೆ ಇಲ್ಲವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶೇಷ ತಂಡ ರಚಿಸಿ ಬಾಂಗ್ಲಾ ನುಸುಳುಕೋರರನ್ನು ಪತ್ತೆ ಮಾಡಿ ಕಳುಹಿಸಬೇಕು ಎಂದು ಶಾಸಕ ಯತ್ನಾಳ್ ಪ್ರಸ್ತಾಪಕ್ಕೆ ರಾಮಲಿಂಗಾರೆಡ್ಡಿ ಉತ್ತರ ನೀಡಿ, ಅಕ್ರಮ ವಲಸಿಗರನ್ನು ಪತ್ತೆ ಮಾಡುವ ಕೆಲಸ ನಡೆಯುತ್ತಿದೆ. ಬಾಂಗ್ಲಾದೇಶದವರು ಐದಾರು ರಾಜ್ಯಗಳಿಂದ ನುಸುಳುತ್ತಾರೆ. ಅಂತಹ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದವರು ತಡೆಯಬೇಕು. ಕೇಂದ್ರ ಸರ್ಕಾರ ಯಾಕೆ ತಡೆಯುತ್ತಿಲ್ಲ. ವಿಶೇಷ ತಂಡ ರಚಿಸಿ ನುಸುಳುಕೋರರ ಪತ್ತೆ ಹಚ್ಚಿ ಕಳುಹಿಸುವ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಸದನಕ್ಕೆ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular