HomeLatest Newsಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿಷೇಧ ಕಡ್ಡಾಯ

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿಷೇಧ ಕಡ್ಡಾಯ

ಬೆಂಗಳೂರು(ವಿಧಾನಸಭೆ): ಸರ್ಕಾರಿ ಆಸ್ಪತ್ರೆಗಳ ಸರ್ಕಾರಿ ಮತ್ತು ಗುತ್ತಿಗೆ ವೈದ್ಯರು ಕರ್ತವ್ಯದ ಅವಧಿಯ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ವೈದ್ಯರು ಕರ್ತವ್ಯದ ವೇಳೆಯ ನಂತರ ಯಾವುದಾದರೂ ಒಂದು ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಅವಕಾಶ ನೀಡಲಾಗಿತ್ತು. ಇದರಿಂದ ಕೆಲವು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಕಾಲಕ್ಕೆ ವೈದ್ಯರು ಸಿಗದೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಮತ್ತು ಇಲಾಖೆಯ ದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ತಮ್ಮ ಕರ್ತವ್ಯದ ಅವಧಿಯ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ಒಳ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ವೈದ್ಯರು ಕೇವಲ ಹೊರರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಬಹುದಾಗಿದೆ. ಇದು ಸರ್ಕಾರಿ ಆಸ್ಪತ್ರೆಗಳ ಗುತ್ತಿಗೆ ವೈದ್ಯರಿಗೂ ಅನ್ವಯವಾಗುತ್ತದೆ. ಇದಕ್ಕೆ ಸರ್ಕಾರಿ ವೈದ್ಯರಿಂದ ವಿರೋಧ ವ್ಯಕ್ತವಾಗಬಹುದು. ಆದರೆ, ಸರ್ಕಾರಿ ಆಸ್ಪತ್ರೆ ರೋಗಿಗಳ ಹಿತದೃಷ್ಟಿಯಿಂದ ಈ ಕ್ರಮ ಅನಿವಾರ್ಯವೆಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular