HomeLive Newsಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

ಧಾರವಾಡ : ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದ ದೃಷ್ಠಿಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ ಜಿಲ್ಲೆಯ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳೊಂದಿಗೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ದ್ವೀಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:0836-2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಧಾರವಾಡ :   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‍ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕøತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳು ಹಾಗೂ ಸ್ವವಿವರಗಳ ಮನವಿಯೊಂದಿಗೆ ಅರ್ಜಿಯನ್ನು ಫೆಬ್ರವರಿ 20, 2026 ರೊಳಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050392209, 7204396275, 9448981944 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular