HomeLatest Newsವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 9 ಕಾಮೆಡ್- ಕೆ ಪರೀಕ್ಷೆ

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 9 ಕಾಮೆಡ್- ಕೆ ಪರೀಕ್ಷೆ

ಬೆಂಗಳೂರು: 2026- 27ನೇ ಶೈಕ್ಷಣಿಕ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಮೇ 9ರಂದು ಕಾಮೆಡ್ -ಕೆ ಪ್ರವೇಶ ಪರೀಕ್ಷೆ ನಡೆಯಲಿದೆ.

ದೇಶಾದ್ಯಂತ 200 ನಗರಗಳ 400ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ರಾಜ್ಯದ ಖಾಸಗಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆದುಕೊಳ್ಳಬಹುದು.

ಕಾಮೆಡ್ –ಕೆ ಪ್ರವೇಶ ಪರೀಕ್ಷೆಗೆ ಫೆಬ್ರವರಿ 3ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮಾರ್ಚ್ 16 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ www.comedk.org, www.unigauge.com ವೆಬ್ಸೈಟ್ ಗಮನಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular