HomeLatest NewsBREAKING: ಕಾನ್ಫಿಡೆಂಟ್ ಗ್ರೂಪ್ ಚೇರ್ಮೆನ್ ಸಿ.ಜೆ.ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆ

BREAKING: ಕಾನ್ಫಿಡೆಂಟ್ ಗ್ರೂಪ್ ಚೇರ್ಮೆನ್ ಸಿ.ಜೆ.ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆ

ಪ್ರಸಿದ್ದ ರಿಯಲ್ ಎಸ್ಟೇಟ್ ಕಂಪನಿ ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ, ಅಧ್ಯಕ್ಷ ಸಿ.ಜೆ.ರಾಯ್ ಶುಕ್ರವಾರ ಮಧ್ಯಾಹ್ನ ಬೆಂಗಳೂರು ನಗರದ ರಿಚ್ಮಂಡ್ ಸರ್ಕಲ್‌ನಲ್ಲಿರುವ ಕಂಪನಿಯ ಕಚೇರಿಯಲ್ಲಿ ಆತ್ಮಕಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿಗಳ ಪ್ರಕಾರ ಅವರು ಬೆಳಗ್ಗೆ ಐಟಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದ್ದರು.

ಗುಂಡು ಹಾರಿಸಿಕೊಂಡು ಸಿ.ಜೆ.ರಾಯ್ ಕಚೇರಿಯ ತಮ್ಮ ಛೇಂಬರ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಅಶೋಕ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ಕೈಗೊಂಡಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಸಿ.ಜೆ.ರಾಯ್ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರೆ?, ಯಾರಿಗಾದರೂ ಫೋನ್ ಮಾಡಿದ್ದರೆ, ಸಂದೇಶ ಕಳಿಸಿದ್ದರೆ? ಎಂದು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆಗಮಿಸಿದ್ದಾರೆ, ಅಧಿಕಾರಿಗಳ ಜೊತೆ ಘಟನೆ ಕುರಿತು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಟಿ ದಾಳಿ ನಡೆದಿತ್ತು: ಕಾನ್ಫಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ನಿವಾಸದ ಮೇಲೆ ಪದೇ ಪದೇ ಐಟಿ ದಾಳಿ ನಡೆದಿತ್ತು. ಸದ್ಯದ ಮಾಹಿತಿಯಂತೆ ಗುರುವಾರ ಸಹ ಐಟಿ ದಾಳಿಯಾಗಿತ್ತು, ಶುಕ್ರವಾರ ಸಹ ದಾಳಿ ಮುಂದುವರೆಸಿದ್ದ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದರು.

ಶುಕ್ರವಾರ ಮಧ್ಯಾಹ್ನ ಸಿ.ಜೆ.ರಾಯ್ ಕಚೇರಿಗೆ ಆಗಮಿಸಿದ್ದರು. ಐಟಿ ಅಧಿಕಾರಿಗಳು ಅವರನ್ನು ಒಂದು ತಾಸು ವಿಚಾರಣೆ ಮಾಡಿ ಹಲವು ದಾಖಲೆಗಳನ್ನು ಕೇಳಿದ್ದರು. ದಾಖಲೆಗಳನ್ನು ತಂದು ಕೊಡುವುದಾಗಿ ಹೇಳಿ ಛೇಂಬರ್‌ಗೆ ಆಗಮಿಸಿದ್ದ ಸಿ.ಜೆ.ರಾಯ್ ಅಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಐಟಿ ಅಧಿಕಾರಿಗಳು ಕಚೇರಿಯಲ್ಲಿ ಇರುವಾಗಲೇ ಈ ಆತ್ಮಹತ್ಯೆ ಪ್ರಕರಣ ನಡೆದಿದೆ. ಘಟನೆಗೆ ಐಟಿ ದಾಳಿಯೇ ಕಾರಣವೇ? ಅಥವ ವ್ಯವಹಾರಿಕ ಕಾರಣಗಳು ಇತ್ತೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಚೇರಿಯ ಸುತ್ತ ಭಾರೀ ಜನರು ಸೇರಿದ್ದು, ಪೊಲೀಸರು ಜನರನ್ನು ನಿಯಂತ್ರಣ ಮಾಡಲು ಹರಸಾಹಸ ಪಡುತ್ತಿದ್ದಾರೆ.

65ಕ್ಕೂ ಹೆಚ್ಚು ರಿಯಲ್ ಎಸ್ಟೇಟ್ ಉದ್ಯಮದ ಯೋಜನೆ ರೂಪಿಸಿದ್ದ ಸಿ.ಜೆ.ರಾಯ್, ಸಿನಿಮಾ ನಿರ್ಮಾಣವನ್ನೂ ಮಾಡುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ನೆರವನ್ನು ನೀಡುತ್ತಿದ್ದರು. ಕಾನ್ಫಿಡೆಂಟ್ ಗ್ರೂಪ್ ಎಂಬ ಬೃಹತ್ ಕಂಪನಿಯ ಉದ್ಯಮಿಯಾಗಿದ್ದವರು ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular