HomeKarnatakaರಂಜಾನ್ ಮಾಸದಲ್ಲಿ ರಾಜ್ಯದ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ: ಬೆಳಿಗ್ಗೆ 8 ರಿಂದ ಮಧ್ಯಾಹ್ನ...

ರಂಜಾನ್ ಮಾಸದಲ್ಲಿ ರಾಜ್ಯದ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ತರಗತಿ  

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 4-20 ರವರೆಗೆ ಶಾಲಾ ಅವಧಿ ನಿಗಧಿಪಡಿಸಲಾಗಿರುತ್ತದೆ.

ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31-10-2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ (Standing Order) ನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿರುತ್ತದೆ. ಮುಂದುವರೆದು, ಉಲ್ಲೇಖಿತ-(2) ರ ಪತ್ರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘ(ರಿ), ಬೆಂಗಳೂರು ರವರು ಮನವಿ ಮಾಡಿಕೊಂಡಿದ್ದು ಅದರಂತೆ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳು ರಂಜಾನ್ ತಿಂಗಳು ಪ್ರಾರಂಭವಾದ ದಿನಾಂದಿಂದ ದಿನಾಂಕ: 20-03-2026ರವರೆಗೆ ಮಾತ್ರ ಶಾಲಾ ಅವಧಿಯ ವೇಳಾಪಟ್ಟಿಯ ಬದಲಾವಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವ್ಯವಸ್ಥೆಯಿಂದ ಶಾಲೆಗಳ ಕೆಲಸದ ಅವಧಿಯಲ್ಲಿ ಕಡಿಮೆ ಆಗುವ ಅವಧಿಯನ್ನು ಇತರೇ ರಜಾ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಸರಿದೂಗಿಸಿಕೊಳ್ಳತಕ್ಕದ್ದು.

ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವ್ರತವನ್ನು ಕೈಗೊಳ್ಳುವುದರಿಂದ ಅವರುಗಳಿಗೆ ರಂಜಾನ್ ಮಾಹೆಯಲ್ಲಿ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ತೆರಳಲು ಅನುಮತಿಸಬಹುದು.

2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಪರೀಕ್ಷಾ ವೇಳಾಪಟ್ಟಿಯಂತೆ ನಡೆಸುವಂತೆ ಕ್ರಮವಹಿಸುವುದು.

2025-26ನೇ ಸಾಲಿಗೆ ನಿಗದಿಪಡಿಸಿರುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶವು ಅನ್ವಯಿಸುವುದಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular