HomeLatest Newsಉದ್ಯಮಿ ಸಿ.ಜೆ. ರಾಯ್ ಸಾವಿನ ಸತ್ಯಾಂಶ ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ: ಡಿಸಿಎಂ ಡಿ.ಕೆ....

ಉದ್ಯಮಿ ಸಿ.ಜೆ. ರಾಯ್ ಸಾವಿನ ಸತ್ಯಾಂಶ ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: ಉನ್ನತ ಮಟ್ಟದ ತನಿಖೆ ನಡೆಸಿ ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಸತ್ಯಾಂಶ ತಿಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ಮ ಐಟಿ ಇಲಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಅನೇಕ ಪ್ರಶ್ನೆಗಳನ್ನ ಕೇಳುವಾಗ 5 ನಿಮಿಷ ಸಮಯ ಕೊಡಿ ಎಂದು ಹೇಳಿ ಒಳಗೆ ಹೋದ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಜನರಿಗೆ ಸತ್ಯಾಂಶ ತಿಳಿಸುತ್ತದೆ ಎಂದು ಹೇಳಿದ್ದಾರೆ.

ರಾಯ್ ಅವರು ಒಳ್ಳೆಯ ಉದ್ಯಮಿಯಾಗಿದ್ದರು. ಈ ರೀತಿ ಆಗಬಾರದಿತ್ತು. ಐಟಿ ಅಧಿಕಾರಿಗಳ ತಂಡ ಕೇರಳದಿಂದ ಬಂದಿತ್ತು ಎನ್ನುವ ಮಾಹಿತಿ ಇದೆ. ಘಟನೆಯ ಬಗ್ಗೆ ದೆಹಲಿಯಿಂದ ಕೂಡ ವರದಿ ಕೇಳಲಾಗಿದೆ. ಉನ್ನತ ಮಟ್ಟದ ತನಿಖೆ ನಡೆಸಿ ಜನರಿಗೆ ಸತ್ಯಾಂಶ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ. ಐಟಿ ಬಗ್ಗೆ ಮಾತನಾಡಿದರೆ ರಾಜಕೀಯ ಆಗುತ್ತದೆ. ಈ ಕಿರುಕುಳ ಖಂಡಿಸುತ್ತೇನೆ, ಇದು ಸರಿಯಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular