HomeLatest Newsಬೆಂಗಳೂರಲ್ಲಿ ವಿಶೇಷ ಚೇತನರಿಗೆ ವಿಶೇಷ ಉದ್ಯೋಗ ಮೇಳ ಆಯೋಜನೆ : ಸಚಿವ ಡಾ. ಶರಣಪ್ರಕಾಶ್ ಪಾಟೀಲ್.!

ಬೆಂಗಳೂರಲ್ಲಿ ವಿಶೇಷ ಚೇತನರಿಗೆ ವಿಶೇಷ ಉದ್ಯೋಗ ಮೇಳ ಆಯೋಜನೆ : ಸಚಿವ ಡಾ. ಶರಣಪ್ರಕಾಶ್ ಪಾಟೀಲ್.!

ಬೆಂಗಳೂರು : ವಿಶೇಷ ಚೇತನರಿಗೆ ಸಮಾಜದಲ್ಲಿ ಸಮಾನ ಅವಕಾಶ ಕಲ್ಪಿಸಲು ಮತ್ತು ಅವರಲ್ಲಿರುವ ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ನೀಡಲು ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿ ಎನ್ಜಿಒಗಳು (NGOs) ಉದ್ಯೋಗ ಮೇಳಗಳನ್ನು ಆಯೋಜಿಸುತ್ತವೆ. ಇದೀಗ ರಾಜ್ಯ ಸರ್ಕಾರ ವಿಶೇಷ ಚೇತನರಿಗೆಂದೇ ವಿಶೇಷ ಉದ್ಯೋಗ ಮೇಳವನ್ನು ನಡೆಸಲು ನಿರ್ಧರಿಸಿದೆ.

ಹೌದು. ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಜೊತೆಗೆ ಸಬಲರನ್ನಾಗಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಚೇತನರಿಗೆಂದೇ ವಿಶೇಷ ಉದ್ಯೋಗ ಮೇಳವನ್ನು ಮೂರು ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಉದ್ಯೋಗ ಮೇಳ ನಡೆಯುವ ದಿನಾಂಕವನ್ನು ಸರ್ಕಾರ ಶೀಘ್ರವೇ ಪ್ರಕಟಿಸುವ ಸಾಧ್ಯತೆಯಿದೆ.

ಮಾಹಿತಿ ಪಡೆಯುವುದು ಹೇಗೆ?
• ಸೇವಾ ಸಿಂಧು ಪೋರ್ಟಲ್: ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
• ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ: ನಿಮ್ಮ ಜಿಲ್ಲೆಯ ಕಚೇರಿಯನ್ನು ಸಂಪರ್ಕಿಸಿದರೆ ಮುಂಬರುವ ಮೇಳಗಳ ಬಗ್ಗೆ ಮಾಹಿತಿ ಸಿಗುತ್ತದೆ.
ಉದ್ಯೋಗ ಮೇಳಗಳಲ್ಲಿ ಭಾಗವಹಿಸುವ ಮುನ್ನ ನಿಮ್ಮ ಕೌಶಲ್ಯಕ್ಕೆ (Skills) ತಕ್ಕಂತಹ ಕಂಪನಿಗಳು ಅಲ್ಲಿ ಬರುತ್ತಿವೆಯೇ ಎಂದು ಪರೀಕ್ಷಿಸಿಕೊಳ್ಳುವುದು ಉತ್ತಮ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular