HomeLatest NewsBREAKING: 40 ಸಾವಿರ ರೂ.ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಕೆಗೆ ಬಿದ್ದ PSI...

BREAKING: 40 ಸಾವಿರ ರೂ.ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಕೆಗೆ ಬಿದ್ದ PSI ಚೇತನ್ ಕುಮಾರ್

ತುಮಕೂರು: 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಪಿಎಸ್ ಐ ಓರ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಗ್ರಾಮಾಂತರ ಠಾಣೆ ಪಿಎಸ್ ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣೆ ವ್ಯಾಪ್ತಿಯಲ್ಲಿ ಕಾರೊಂದನ್ನು ವಶಕ್ಕೆ ಪಡೆದಿದ್ದ ಪಿಎಸ್ ಐ ಚೇತನ್ ಕುಮಾರ್, ಕಾರಿನಲ್ಲಿ ಅನುಮಾನಾಸ್ಪದ ವಸ್ತುಗಳು ಇವೆ ಎಂದು ಠಾಣೆಗೆ ತಂದಿದ್ದಾರೆ. ಬಳಿಕ ಕಾರು ಬಿಡದೇ ಪ್ರಕರಣವನ್ನೂ ದಾಅಖಲಿಸದೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು ಮೂಲದ ವ್ಯಕ್ತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು 40 ಸಾವಿರ ರೂಪಾಯಿ ಫೈನಲ್ ಮಾಡಿದ್ದರು. ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟೋಲ್ ನ ಅಂಗಡಿಯೊಂದರಲ್ಲಿ ಹಣ ಕೊಡಲು ಪಿಎಸ್ ಐ ಹೇಳಿದ್ದರು. ಅಂಗಡಿಗೆ ಹಣ ಕೊಡಲು ಬರುವವನ ಫೋಟೋವನ್ನು ಅಂಗಡಿಯವನಿಗೆ ರವಾನಿಸಿದ್ದರು. ಅಂಗಡಿಯವನ ಮೊಬೈಲ್ ಪರಿಶೀಲಿಸಿದಾಗ ಪಿಎಸ್ ಐ ಪಾತ್ರ ಬಯಲಾಗಿದೆ. ಸದ್ಯ ಪಿಎಸ್ ಐ ಚೇತನ್ ಕುಮಾರ್ ನನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular