HomeIndiaBIG NEWS: ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಸರ್ಕಾರಿ ಶಾಲೆಯ ಶಿಕ್ಷಕ ಅರೆಸ್ಟ್

BIG NEWS: ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಸರ್ಕಾರಿ ಶಾಲೆಯ ಶಿಕ್ಷಕ ಅರೆಸ್ಟ್

ಭೋಪಾಲ್: ಒಂದನೇ ತರಗತಿ ವಿದ್ಯಾಅರ್ಥಿನಿ ಮೇಲೆ ಕಾಮುಕ ಶಿಕ್ಷಕನೊಬ್ಬ ಅಟ್ಟಹಾಸಮೆರೆದಿರುವ ಘಟನೆ ಮಧ್ಯಪ್ರದೇಶದ ಟಿಕಮ್ ಗಢ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.

ಎಂದಿನಂತೆ ಶಾಲೆಗೆ ಬಂದ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಶಾಲೆಯಿಂದ ಮನೆಗೆ ತೆರಳದ ಬಾಲಕಿ, ತನ್ನ ಪೋಷಕರ ಬಳಿ ವಿಷಯ ಹೇಳಿದ್ದಾಳೆ. ಶಿಕ್ಷಕ ತನ್ನೊಂದಿಗೆ ನಡೆದುಕೊಂಡ ರೀತಿ ವಿವರಿಸಿದ್ದಾಳೆ.

ಗ್ರಾಮಸ್ಥರೊಂದಿಗೆ ಪಲೇರಾ ಪೊಲೀಸ್ ಠಾಣೆಗೆ ಆಗಮಿಸಿದ ಪೋಷಕರು, ಶಿಕ್ಷಕನನ್ನು ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದಾರೆ. ತಕ್ಷಣ ಶಿಕ್ಷಕನ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಶಿಕ್ಷನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ತನಿಖೆ ಮುಂದುವರೆದಿದೆ ಎಂದು ಟಿಕಮ್ ಗಢ ಎ ಎಸ್ ಪಿ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular