HomeLatest Newsಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಹಾಯಕ ಕಮಿಷ್ನರ್ ಆದೇಶ ಹೊರಡಿಸಿದ್ದರು. ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಪುತ್ತೂರು ಸಹಾಯಕ ಕಮಿಷ್ನರ್ ಹೊರಡಿಸಿದ್ದ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಅಲ್ಲದೇ ಸಹಾಯಕ ಕಮಿಷನರ್ ಆದೇಶ ಸೂಕ್ತವಲ್ಲ ಎಂದು ತಿಳಿಸಿದೆ. ಇದೇ ವೇಳೆ 21 ದಿನಗಳ ಒಳಗೆ ಪ್ರಕರಣದ ಮರು ವಿಚಾರಣೆ ನ್ಡೆಸಿ ಆದೇಶ ನೀಡುವಂತೆ ಸಹಾಯಕ ಕಮಿಷ್ನರ್ ಗೆ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular