HomeLatest Newsನಾಳೆ ನಿರ್ಮಲಾ ಸೀತಾರಾಮನ್ ಸತತ 9ನೇ ಬಜೆಟ್ ಮಂಡನೆ

ನಾಳೆ ನಿರ್ಮಲಾ ಸೀತಾರಾಮನ್ ಸತತ 9ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದಾರೆ. ಅವರು ಸತತ 9ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.

2019ರ ಜುಲೈನಲ್ಲಿ ಮೊದಲ ಪೂರ್ಣಾವಧಿ ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದ ನಿರ್ಮಲಾ ಸೀತಾರಾಮನ್ 2024ರ ಫೆಬ್ರವರಿಯ ಮಧ್ಯಂತರ ಬಜೆಟ್ ಜೊತೆಗೆ ಸತತ 8 ಬಜೆಟ್ ಮಂಡಿಸಿದ್ದು, ಫೆಬ್ರವರಿ 1ರ ನಾಳೆ 9ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಅತಿ ಹೆಚ್ಚು ಕೇಂದ್ರ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅವರು 10 ಬಾರಿ ಬಜೆಟ್ ಮಂಡಿಸಿದ್ದಾರೆ. ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ 9 ಬಾರಿ ಬಜೆಟ್ ಮಂಡಿಸಿದ್ದಾರೆ. ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ ಹಣಕಾಸು ಸಚಿವರಾಗಿ ಎಂಟು ಬಾರಿ ಬಜೆಟ್ ಮಂಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿರ್ಮಲ ಸೀತಾರಾಮನ್ ಅವರು ಸತತ ಎಂಟು ಬಾರಿ ಬಜೆಟ್ ಮಂಡಿಸಿದ ಮೊದಲ ಮಹಿಳಾ ಸಚಿವರು. ಅವರು ನಾಳೆ 9ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರು ಐದು ನೇರ ಬಜೆಟ್ ಮಂಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular