HomeLatest Newsಸಚಿವ ಜಮೀರ್ ಪುತ್ರ ಝೈದ್ ಖಾನ್ ‘ಕಲ್ಟ್’ ಸಿನಿಮಾ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ ಶುಭ ಹಾರೈಕೆ

ಸಚಿವ ಜಮೀರ್ ಪುತ್ರ ಝೈದ್ ಖಾನ್ ‘ಕಲ್ಟ್’ ಸಿನಿಮಾ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ ಶುಭ ಹಾರೈಕೆ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ ‘ಕಲ್ಟ್’ ಸಿನಿಮಾವನ್ನು ವೀಕ್ಷಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಓರಾಯನ್ ಮಾಲ್ ನಲ್ಲಿ ಸಿನಿಮಾ ವೀಕ್ಷಿಸಿದ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

ಸಂಪುಟ ಸಹೋದ್ಯೋಗಿಗಳು, ಆತ್ಮೀಯರು ಆದ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ ‘ಕಲ್ಟ್’ ಸಿನಿಮಾವನ್ನು ವೀಕ್ಷಿಸಿದೆ. ಚಿತ್ರದ ಕತೆ, ಸಂಭಾಷಣೆ, ಸಂಗೀತ, ಕಲಾವಿದರ ಅಭಿನಯ ಈ ಎಲ್ಲವೂ ಇಡೀ ಚಿತ್ರವನ್ನು ಅತ್ಯಂತ ಸೊಗಸಾಗಿ ಕಟ್ಟಿಕೊಟ್ಟಿದೆ. ಕುಟುಂಬ ಸಮೇತರಾಗಿ ಬಂದು ನೋಡಬಹುದಾದ ಒಂದು ಚಿತ್ರ ಇದು. ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿ ಪ್ರದರ್ಶನ ಕಂಡು ಶತದಿನ ಪೂರೈಸಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
https://twitter.com/siddaramaiah/status/2017650969480466655

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular