HomeIndiaBIG NEWS: ವಾಣಿಜ್ಯ ಸಿಲಿಂಡರ್ ದರ ಮತ್ತೆ ಹೆಚ್ಚಳ: ಇಂದಿನಿಂದಲೇ ಜಾರಿ

BIG NEWS: ವಾಣಿಜ್ಯ ಸಿಲಿಂಡರ್ ದರ ಮತ್ತೆ ಹೆಚ್ಚಳ: ಇಂದಿನಿಂದಲೇ ಜಾರಿ

ನವದೆಹಲಿ: ದೇಶಾದ್ಯಂತ ವಾಣಿಜ್ಯ ಸಿಲಿಂಡರ್ ದರದಲ್ಲಿ ಹೆಚ್ಚಳವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಿವೆ.

19 ಕೆಜಿಯ ವಾಣಿಜ್ಯ ಸಿಲಿಂಡರ್ ದರ 49 ರೂಪಾಯಿ ಏರಿಕೆಯಾಗಿದೆ. ಪರಿಷ್ಕೃತ ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದೆ. ತಿಂಗಳ ಹಿಂದಷ್ಟೇ ಜನವರಿಯಲ್ಲಿ ವಾಣಿಜ್ಯ ಸಿಲಿಂದರ್ ದರ 111 ರೂಪಾಯಿ ಏರಿಕೆಯಾಗಿತ್ತು. ಇದೀಗ ಮತ್ತೆ ಸಿಲಿಂಡರ್ ದರವನ್ನು ಹೆಚ್ಚಳ ಮಾಡಲಾಗಿದೆ.

ವಾಣಿಜ್ಯ ಸಿಲಿಂಡರ್ ದರ ಹೆಚ್ಚಳವಾದರೂ ಅಡುಗೆ ಸಿಲಿಂಡರ್ ಮೇಲೆ ಯಾವುದೇ ಬೆಲೆ ಏರಿಕೆ ಪರಿಣಾಮ ಬಿದ್ದಿಲ್ಲ. 14.2 ಕೆಜಿಯ ದೇಶಿಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular