ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ವ್ಯಕ್ತಿ ಬಲಿಯಾಅಗಿರುವ ಘಟನ್ಎ ನಡೆದಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬರು ಮೃತಪಟ್ಟಿದ್ದಾರೆ. ಸಾವು-ನೋವು ಸಂಭವಿಸದಂತೆ ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿತ್ತು. ಆದಾಗ್ಯೂ ಒಂದು ಸಾವು ಸಂಭವಿಸಿರುವುದು ನೋವು ತಂದಿದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಮಂಗನ ಕಾಯಿಲೆ ಬಗ್ಗೆ ಮತ್ತಷ್ಟು ಎಚ್ಚರಿಕೆ ವಹಿಸಲಿದೆ. ಈಗಾಗಲೇ ಕೆ.ಎಫ್.ಡಿ ಕಾಯಿಲೆಗೆ ವ್ಯಾಕ್ಸಿನ್ ಸಿದ್ಧವಾಗುತ್ತಿದೆ. ಮುಂದಿನ ವರ್ಷದೊಳಗೆ ವ್ಯಾಕ್ಸಿನ್ ಲಭ್ಯವಾಗಲಿದೆ ಎಂದರು.

