HomeLatest Newsಖರ್ಗೆ, ಪರಿಶಿಷ್ಟ ಸಮುದಾಯ ನಾಯಕರ ಅವಹೇಳನ: ಫೇಸ್ಬುಕ್ ಖಾತೆ ಅಡ್ಮಿನ್ ಅರೆಸ್ಟ್

ಖರ್ಗೆ, ಪರಿಶಿಷ್ಟ ಸಮುದಾಯ ನಾಯಕರ ಅವಹೇಳನ: ಫೇಸ್ಬುಕ್ ಖಾತೆ ಅಡ್ಮಿನ್ ಅರೆಸ್ಟ್

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಪರಿಶಿಷ್ಟ ಸಮುದಾಯದ ನಾಯಕರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸುತ್ತಿದ್ದ ಫೇಸ್ಬುಕ್ ಖಾತೆ ಅಡ್ಮಿನ್ ಬಂಧಿಸಲಾಗಿದೆ.

‘ಗುಲಾಮರ ಅಪ್ಪ’ ಸಾಮಾಜಿಕ ಜಾಲತಾಣದಲ್ಲಿ ನಾಯಕರನ್ನು ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ಕಲಬುರ್ಗಿ ಸಬರ್ಬನ್ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನ ವಿದ್ಯಾಮಾನ್ಯ ನಗರ ನಿವಾಸಿ ಆನಂದ್ ಅಂಜನಪ್ಪ(40) ಬಂಧಿತ ಆರೋಪಿ.

ಬೆಂಗಳೂರು ಕಂಪನಿಯೊಂದರಲ್ಲಿ ಹಿರಿಯ ಐಟಿ ಎಕ್ಸಿಕ್ಯೂಟಿವ್ ಆಗಿ ಆನಂದ್ ಕೆಲಸ ಮಾಡುತ್ತಿದ್ದು, ‘ಗುಲಾಮರ ಅಪ್ಪ’ ಹೆಸರಲ್ಲಿ ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸುತ್ತಿದ್ದ ಬಗ್ಗೆ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಕಲಬುರಗಿ ಸಬರ್ಬನ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular