HomeLatest Newsಮೋಟಾರು ಅಪಘಾತ ಕ್ಲೇಮ್ ಗಳಿಗೆ ತೆರಿಗೆ ವಿನಾಯಿತಿ ಘೋಷಣೆ

ಮೋಟಾರು ಅಪಘಾತ ಕ್ಲೇಮ್ ಗಳಿಗೆ ತೆರಿಗೆ ವಿನಾಯಿತಿ ಘೋಷಣೆ

ನವದೆಹಲಿ: ಮೋಟಾರು ಅಪಘಾತ ಕ್ಲೇಮ್ ಗಳಿಗೆ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿದ ಬಜೆಟ್ ನಲ್ಲಿ ಅಪಘಾತ ಪ್ರಕರಣಗಳಲ್ಲಿ ಮೋಟಾರು ಅಪಘಾತ ಕ್ಲೇಮ್ ನ್ಯಾಯಮಂಡಳಿಯಿಂದ ಪಡೆದುಕೊಳ್ಳುವ ಬಡ್ಡಿ ರೂಪದಲ್ಲಿನ ಯಾವುದೇ ಆದಾಯಕ್ಕೆ ತೆರಿಗೆ ಇರುವುದಿಲ್ಲ ಎಂದು ಘೋಷಿಸಿದ್ದಾರೆ.

1988ರ ಮೋಟಾರು ವಾಹನ ಕಾಯ್ದೆಯ ಪ್ರಕಾರ ಅಪಘಾತಕ್ಕೆ ಒಳಗಾದ ವ್ಯಕ್ತಿಯ ಕಾನೂನುಬದ್ಧ ಉತ್ತರಾಧಿಕಾರಿಗೆ ವ್ಯಕ್ತಿಯ ಸಾವು ಅಥವಾ ಶಾಶ್ವತ ಅಂಗವಿಕಲತೆ ಅಥವಾ ಕಾಯ್ದೆಯಲ್ಲಿ ತಿಳಿಸಿರುವ ಯಾವುದೇ ದೈಹಿಕ ಗಾಯವಾಗಲಿ ನ್ಯಾಯಮಂಡಳಿಯು ಪರಿಹಾರ ಮೊತ್ತ ಮತ್ತು ಬಡ್ಡಿ ನೀಡುತ್ತದೆ. ಯಾವುದೇ ವ್ಯಕ್ತಿ ಅಥವಾ ಕಾನೂನುಬದ್ಧ ಉತ್ತರಾಧಿಕಾರಿಗೆ ತೆರಿಗೆ ವಿನಾಯಿತಿ ನೀಡಲು ತಿದ್ದುಪಡಿ ಮಾಡಲು ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಪ್ರಸಕ್ತ ವರ್ಷದ ಏಪ್ರಿಲ್ 1ರಿಂದ ಈ ತಿದ್ದುಪಡಿ ಜಾರಿಗೆ ಬರಲಿದ್ದು, ಮೋಟಾರು ಅಪಘಾತ ಕ್ಲೇಮ್ ಗಳಿಗೆ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular