HomeIndiaBIG NEWS: ಫೋನ್ ಕದ್ದಾಲಿಕೆ ಪ್ರಕರಣ: SITಯಿಂದ ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ವಿಚಾರಣೆ

BIG NEWS: ಫೋನ್ ಕದ್ದಾಲಿಕೆ ಪ್ರಕರಣ: SITಯಿಂದ ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ವಿಚಾರಣೆ

ಹೈದರಾಬಾದ್: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮಾಜಿ ಮುಖ್ಯಮಂತ್ರಿ, ಬಿಆರ್ ಎಸ್ ಪಕ್ಷದ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಅವರನ್ನು ಎಸ್ ಐಟಿ ವಿಚಾರಣೆ ನಡೆಸಿದೆ.

ಬಿಆರ್ ಎಸ್ ಸರ್ಕಾರದ ವಧಿಯಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಚಂದ್ರಶೇಖರ್ ರಾವ್ ಅವರನ್ನು ಸುಮಾರು ೫ ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಪಕ್ಷದ ಬೆಂಬಲಿಗರು ಚಂದ್ರಶೇಖರ್ ರಾವ್ ಅವರ ಮನೆ ಬಳಿ ಜಮಾವಣೆಗೊಂಡರು. ಮನೆಯ ಬಳಿ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ತನಿಖೆಗೆ ಕೆ.ಸಿ.ಆರ್ ಸಂಪೂರ್ಣವಾಗಿ ಸಹಕರಿಸಿದ್ದಾರೆ. ಇದೊಂದು ಸುಳ್ಳು ಪ್ರಕರಣವಾಗಿದೆ. ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ. ಅಧಿಕಾರಿಗಳು ಕೆ.ಸಿ.ಆರ್ ಬಳಿ ಏನು ಕೇಳಿದ್ದಾರೆ ಗೊತ್ತಿಲ್ಲ ಎಂದು ಕೆ.ಚಂದ್ರಶೇಖರ್ ರಾವ್ ಪುತ್ರ ಕೆ.ಟಿ.ರಾಮರಾವ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಚಂದ್ರಶೇಖರ್ ರಾವ್ ಅಧಿಕಾರಾವಧಿಯಲ್ಲಿ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಪತ್ರಕರ್ತರು ಸೇರಿದಂತೆ ಗಣ್ಯ ವ್ಯಕ್ತಿಗಳ ಫೋನ್ ಕದ್ದಾಲಿಕೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಕೆ.ಚಂದ್ರಶೇಖರ್ ರವ ವಿಚಾರಣೆ ನಡೆಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular