ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ ಪೇಟೆಯಲ್ಲಿ ನಡೆಯಲಿರುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸಾಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರಿಗೆ, ಭಕ್ತಾದಿಗಳಿಗೆ ಅನುಕೂಲವಾಗುವಂತೆ ತಾತ್ಕಾಲಿಕವಾಗಿ ದ್ವಿಚಕ್ರ, ಲಘುವಾಹನಗಳು ಹಾಗೂ ಭಾರಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ, ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ನೀಡಿದ್ದಾರೆ.
ಸಾಗರ ಟೌನ್ ಪೊಲೀಸ್ ಠಾಣೆಯ ಎದುರಿನ ಜೆ.ಸಿ. ವೃತ್ತದಿಂದ ಜೆ.ಸಿ.ರಸ್ತೆ ಮೂಲಕ ಸಾಗರ ಸರ್ಕಲ್ ಮಾರ್ಗವಾಗಿ ಐತಪ್ಪ ವೃತ್ತದವರೆಗೆ ಪ್ಯಾರಲಲ್ ರಸ್ತೆಗಳು, ಅಂಬೇಡ್ಕರ್ ಸರ್ಕಲ್ (ಲಿಂಬು ಸರ್ಕಲ್) ನಿಂದ ಸಾಗರ ಸರ್ಕಲರ್ವರೆಗೆ, ಸತ್ಯನಾರಾಯಣ ಸ್ವಾಮಿ ದೇವಸ್ಥಾನ ಸರ್ಕಲ್ನಿಂದ ಸಾಗರ ಸರ್ಕಲ್ವರೆಗೆ ವಾಹನ ಸಂಚಾರ ನಿಷೇಧಿಸಿದೆ.
ದುರ್ಗಾಂಬ ವೃತ್ತ (ಸೊರಬ ಸರ್ಕಲ್) ಮೂಲಕ ಸೊರಬ ರಸ್ತೆ, ಮಾರ್ಕೆಟ್ ರಸ್ತೆ ಮೂಲಕ ಎಸ್.ಎನ್. ವೃತ್ತದವರೆಗೆ ಎಲ್ಲಾ ಮಾದರಿ ವಾಹನಗಳ ನಿಲುಗಡೆ ನಿಷೇಧ ಹಾಗೂ ಬೆಳಗ್ಗೆ 10 ರಿಂದ ರಾತ್ರಿ 12 ರವರೆಗೆ ಎಲ್ಲಾ ಮಾದರಿಯ ಸರಕು ವಾಹನಗಳ ಸಂಚಾರ ನಿಷೇಧ. ಸರ್ಕರಿ ಆಸ್ಪತ್ರೆಯ ಹಿಂದಿನ ಗೇಟ್ನಿಂದ ಚರ್ಚ್ ಪಕ್ಕದ ರಸ್ತೆ ಮತ್ತು ಖಚಾನೆ ರಸ್ತೆಗಳು, ಬಿ.ಹೆಚ್.ರಸ್ತೆವರೆಗೆ ವಾಹನ ನಿಲುಗಡೆ ನಿಷೇಧ (ಆಸ್ಪತ್ರೆಗೆ ಬರುವ ವಾಹನ ಮತ್ತು ಅಂಬ್ಯುಲೆನ್ಸ್ ಸುಗಮ ಸಂಚಾರದ ಅನುಕೂಲಕ್ಕಾಗಿ). ವರದಹಳ್ಳಿ ಕ್ರಾಸ್ನಿಂದ ಹಂಪಯ್ಯನ ಕೊಳದವರೆಗೆ ಫೆ. 03 ರಿಂದ ಫೆ. 20 ರವರೆಗೆ (ಜಾತ್ರೆ ಅವಧಿಯಲ್ಲಿ) ಎನ್.ಹೆಚ್.-69 ಬಿ.ಹೆಚ್ ರಸ್ತೆಯಲ್ಲಿ ಸರದಿಯಂತೆ ಲಘು 04 ಚಕ್ರದ ವಾಹನ ಮತ್ತು ದ್ವಿಚಕತ್ರ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತೀಗಣ್ಯ ವ್ಯಕ್ತಿಗಳ ವಾಹನಗಳು, ಅಂಬ್ಯುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳ ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಫೆ. 07 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ, : ಶಿವಮೊಗ್ಗ ಎಂ.ಆರ್.ಎಸ್. ವಿವಿ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹರ್ಳಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಇನ್ನಿತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

