ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತ ಸಂಭವಿಸಿದ್ದು, 4ನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
4 ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಮೃತ ಯುವಕನನ್ನು ಇರ್ಫಾನ್ ಮುಲ್ಲಾನಿ (26 ) ಎಂದು ಗುರುತಿಸಲಾಗಿದೆ. ಇದು ಆಕಸ್ಮಿಕವಾಗಿ ನಡೆದ ಘಟನೆಯೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ಮೃತರ ಕುಟುಂಬಸ್ಥರು ಮತ್ತು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯಕ್ಕೆ ಇದು ಆಕಸ್ಮಿಕ ಸಾವು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ

