HomeLatest Newsಗೃಹಲಕ್ಷ್ಮಿ ಯೋಜನೆ: 52 ಸಾವಿರ ಮಹಿಳೆಯರಿಗೆ ಹಣ ಸ್ಥಗಿತ, ಈಗಲೂ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಹಣ

ಗೃಹಲಕ್ಷ್ಮಿ ಯೋಜನೆ: 52 ಸಾವಿರ ಮಹಿಳೆಯರಿಗೆ ಹಣ ಸ್ಥಗಿತ, ಈಗಲೂ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಹಣ

ಬೆಂಗಳೂರು(ವಿಧಾನ ಪರಿಷತ್) : ಜಿಎಸ್‌ಟಿ ಮತ್ತು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎನ್ನುವ ಕಾರಣಕ್ಕೆ ಸುಮಾರು 52,000 ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತಿಲ್ಲ. ಇವರಲ್ಲಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆ ಇತ್ಯರ್ಥಪಡಿಸಲಾಗಿದೆ. ಉಳಿದ ಫಲಾನುಭವಿಗಳ ಸಮಸ್ಯೆ ಸರಿಪಡಿಸಲು ಕ್ರಮ ವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಪಿ.ಹೆಚ್. ಪೂಜಾರ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ರಾಜ್ಯದಲ್ಲಿ ಸುಮಾರು 1.26 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಕೆಲವು ಫಲಾನುಭವಿಗಳು ಕೆಲವು ವ್ಯವಹಾರ ನಡೆಸುವಾಗ ಜಿಎಸ್‌ಟಿ ಆದಾಯ ತೆರಿಗೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮಿ ಯೋಜನೆ ಸಂಬಂಧ ರೂಪಿಸಿದ ಸಾಫ್ಟ್ವೇರ್ ನಲ್ಲಿ ಜಿಎಸ್​ಟಿ, ಆದಾಯ ತೆರಿಗೆ ಎಂದು ತೋರಿಸಿದಲ್ಲಿ ಬದಲಾವಣೆ ಮಾಡಲು ಆಗುವುದಿಲ್ಲ. ಇದರಲ್ಲಿ ಸರ್ಕಾರ ಅಥವಾ ಇಲಾಖೆಯ ಯಾವುದೇ ತಪ್ಪಿಲ್ಲ. ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆಯಾಗಿದ್ದು, ಈಗಲೂ ಅರ್ಜಿ ಸಲ್ಲಿಸಿದವರಿಗೆ ಹಣ ನೀಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular