HomeLatest NewsBIG NEWS: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಡಿಸಿಗಳಿಗೆ ಸರ್ಕಾರ ಸೂಚನೆ

BIG NEWS: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಡಿಸಿಗಳಿಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಅವಧಿ ಮಾರ್ಚ್ ಅಂತ್ಯದೊಳಗೆ ಮುಕ್ತಾಯವಾಗಲಿದ್ದು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಪ್ರತಿಪಕ್ಷ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿದ್ದು, ಹೊಸದಾಗಿ ಚುನಾವಣೆ ನಡೆಯುವವರೆಗೆ ಆಡಳಿತಾಧಿಕಾರಿ ನೇಮಕ ಮಾಡುವ ಬದಲು ಹಾಲಿ ಸದಸ್ಯರನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣೆ ನಡೆಸುವುದು ತುಂಬಾ ತಡವಾದರೆ ಮಾತ್ರ ಕಾನೂನಿನಡಿ ಹಾಲಿ ಸದಸ್ಯರನ್ನು ಮುಂದುವರೆಸಲು ಅವಕಾಶವಿದೆ. ಆದರೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಹಾಲಿ ಸದಸ್ಯರನ್ನು ಮುಂದುವರೆಸುವ ಅಗತ್ಯ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular