HomeLatest NewsBREAKING: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನರು

BREAKING: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಮನೆಗಳ ಮುಂದೆ ಓಡಾಡುತ್ತಿರುವ ಚಿರತೆ ಕಂಡು ಬೆಂಗಳೂರಿನ ಜನರು ಬೆಚ್ಚಿ ಬಿದ್ದಿದಾರೆ.

ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಆಗಾಗ ಚಿರತೆ ಹಾವಳಿ ಕಂಡುಬರುತ್ತಿತ್ತು, ಆಹಾರವನ್ನರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿರುವುದನ್ನು ಗಮನಿಸಿದ್ದೆವು. ಆದರೆ ಈಗ ಬೆಂಗಳೂರು ನಗರಕ್ಕೆ ಚಿರತೆ ಎಂಟ್ರಿ ಕೊಟ್ಟಿದ್ದು, ಸಿಸಿಟಿವಿಯಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.

ಬೆಂಗಳೂರಿನ ಅಂಜನಾಪುರದ 7ನೇ ಬ್ಲಾಕ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಚಿರತೆ ಮನೆಗಳ ಮುಂದೆ ಓಡಾಟ ನಡೆಸಿದೆ. ತುರೆಹಳ್ಳಿ ಅರಣ್ಯ ಪ್ರದೇಶ ಸಮೀಪವಿರುವುದರಿಂದ ಅಲ್ಲಿಂದಲೇ ಚಿರತೆ ಬಂದಿರುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಯಿಂದ ಹೊರಬರಲು ನಿವಾಸಿಗಳು ಭಯಪಡುತ್ತಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಒಟ್ಟಾರೆ ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೂ ಚಿರತೆ ಆಗಮಿಸಿದ್ದು, ಜನರನ್ನು ಆತಂಕಕ್ಕೀಡುಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular