HomeSpecialಲಕ್ನೋದಲ್ಲಿ ಗೂಳಿಯ ಅಟ್ಟಹಾಸ: ಬಾಲಕಿಯ ಮೇಲೆ ದಾಳಿ ಮಾಡಿದ ಭಯಾನಕ ವಿಡಿಯೋ ವೈರಲ್

ಲಕ್ನೋದಲ್ಲಿ ಗೂಳಿಯ ಅಟ್ಟಹಾಸ: ಬಾಲಕಿಯ ಮೇಲೆ ದಾಳಿ ಮಾಡಿದ ಭಯಾನಕ ವಿಡಿಯೋ ವೈರಲ್

ಉತ್ತರ ಪ್ರದೇಶದ ಲಕ್ನೋದ ಚೌಪಟಿಯಾ ಕಾಲೋನಿಯಲ್ಲಿ ನಡೆದ ಆಘಾತಕಾರಿ ಘಟನೆಯ ಸಿಸಿಟಿವಿ ದೃಶ್ಯಾವಳಿ ಈಗ ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವಸತಿ ಪ್ರದೇಶದ ಕಿರಿದಾದ ಗಲ್ಲಿಯೊಂದರಲ್ಲಿ ತನ್ನ ಪಾಡಿಗೆ ತಾನು ಹೋಗುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಗೂಳಿಯೊಂದು ಭೀಕರವಾಗಿ ದಾಳಿ ಮಾಡಿದ್ದು, ಅಲ್ಲಿನ ನಿವಾಸಿಗಳನ್ನು ಬೆಚ್ಚಿಬೀಳಿಸಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಗೂಳಿಯು ಆಕ್ರಮಣಕಾರಿಯಾಗಿ ಬಾಲಕಿಯನ್ನು ಅಟ್ಟಿಸಿಕೊಂಡು ಬರುವುದನ್ನು ಕಾಣಬಹುದು. ಭಯದಿಂದ ಬಾಲಕಿ ಸಹಾಯಕ್ಕಾಗಿ ಕಿರುಚುತ್ತಾ ಓಡುತ್ತಿದ್ದರೆ, ಗೂಳಿ ಅವಳನ್ನು ಕೆಡವಿ ಕಾಲಿನಿಂದ ತುಳಿಯಲು ಯತ್ನಿಸಿದೆ. ಕೂಡಲೇ ಎಚ್ಚೆತ್ತ ಏಳೆಂಟು ಸ್ಥಳೀಯ ನಿವಾಸಿಗಳು ಬಾಲಕಿಯ ರಕ್ಷಣೆಗೆ ಧಾವಿಸಿದ್ದಾರೆ. ಗೂಳಿಯನ್ನು ಹೆದರಿಸಲು ಅದರ ಮೇಲೆ ಕಲ್ಲು ತೂರುತ್ತಾ, ಕೂಗಾಡುತ್ತಾ ಬಾಲಕಿಯನ್ನು ರಕ್ಷಿಸಲು ಸಾಹಸ ಪಟ್ಟಿದ್ದಾರೆ.

ಜನರು ಅಟ್ಟಿಸಿಕೊಂಡು ಬರುತ್ತಿದ್ದರೂ ಜಗ್ಗದ ಗೂಳಿ ಬಾಲಕಿಯನ್ನು ತುಳಿಯುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಕೊನೆಗೆ ಜನರ ಗುಂಪು ಮತ್ತು ಕಲ್ಲು ತೂರಾಟಕ್ಕೆ ಹೆದರಿದ ಗೂಳಿ ಅಲ್ಲಿಂದ ಕಾಲ್ಕಿತ್ತಿದೆ. ತಕ್ಷಣವೇ ಬಾಲಕಿಯನ್ನು ಅಲ್ಲಿಂದ ಸುರಕ್ಷಿತವಾಗಿ ಹೊರತರಲಾಗಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾದ ಬೆನ್ನಲ್ಲೇ ಸಾರ್ವಜನಿಕರು ಉತ್ತರ ಪ್ರದೇಶ ಸರ್ಕಾರ ಮತ್ತು ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರ ಪ್ರದೇಶಗಳಲ್ಲಿ ಬಿಡಾಡಿ ದನಗಳ ಹಾವಳಿ ಪ್ರಾಣಕ್ಕೆ ಕಂಟಕವಾಗುತ್ತಿದೆ ಎಂದು ಜನರು ದೂರಿದ್ದಾರೆ. “ನಗರಗಳಲ್ಲಿ ಮಕ್ಕಳು ಮತ್ತು ವೃದ್ಧರ ಸುರಕ್ಷತೆ ಎಲ್ಲಿದೆ?” ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಬಿಡಾಡಿ ಪ್ರಾಣಿಗಳನ್ನು ನಿಯಂತ್ರಿಸಲು ಅಧಿಕಾರಿಗಳು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular