HomeLatest Newsತಂಬಾಕು ಮೇಲಿನ ಅಬಕಾರಿ ಸುಂಕ ವಿನಾಯಿತಿ: HDK ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ

ತಂಬಾಕು ಮೇಲಿನ ಅಬಕಾರಿ ಸುಂಕ ವಿನಾಯಿತಿ: HDK ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ

ನವದೆಹಲಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಯತ್ನದಿಂದ ಎಫ್.ಸಿ.ವಿ. ತಂಬಾಕಿನ ಮೇಲೆ ವಿಧಿಸಲಾಗಿದ್ದ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ.

ಈ ತಂಬಾಕಿನ ಮೇಲೆ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರ ಉಳಿದಿದ್ದರು. ಇದರಿಂದ ತಂಬಾಕು ಬೆಳೆ ಬೆಳೆದ ರೈತರಿಗೆ ತೊಂದರೆಯಾಗಿತ್ತು. ಬೆಳೆ ಮಾರಾಟವಾಗದೆ ಪಿರಿಯಾಪಟ್ಟಣ, ಹುಣಸೂರು, ಎಚ್.ಡಿ. ಕೋಟೆಮ ಅರಕಲಗೂಡು ಸೇರಿದಂತೆ ರಾಜ್ಯದ ವಿವಿಧೆಡೆಯ ತಂಬಾಕು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಸಂಕಷ್ಟ ತೋಡಿಕೊಂಡಿದ್ದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ಈ ವಿಷಯ ತಂದ ಎಚ್‍.ಡಿ. ಕುಮಾರಸ್ವಾಮಿ ತಂಬಾಕು ಮೇಲಿನ ಅಬಕಾರಿ ಸುಂಕ ರದ್ದು ಮಾಡಲು ವಿನಂತಿ ಮನವಿ ಮಾಡಿದ್ದರು. ಕೂಡಲೇ ಸ್ಪಂದಿಸಿದ ಹಣಕಾಸು ಸಚಿವರು ತಂಬಾಕು ಮೇಲಿನ ಸುಂಕ ವಿನಾಯಿತಿ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular