HomeJobsಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಎಲ್ಲಾ ನೇರ ನೇಮಕಾತಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ಸರ್ಕಾರ ಅಧಿಕೃತ...

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಎಲ್ಲಾ ನೇರ ನೇಮಕಾತಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ನೇರ ನೇಮಕಾತಿಗಳಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

2027ರ ಅಂತ್ಯದವರೆಗೆ ನೇರ ನೇಮಕಾತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಎಲ್ಲಾ ಅಧಿಸೂಚನೆಗಳಿಗೆ ಈ ಆದೇಶ ಅನ್ವಯವಾಗುತ್ತದೆ. ನೇಮಕಾತಿಗೆ ಅರ್ಜಿ ಸಲ್ಲಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಆಯಾ ನೇಮಕ ನಿಯಮಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 5 ವರ್ಷ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಅಧಿಕೃತ ರಾಜ್ಯಪತ್ರ ಹೊರಡಿಸಲಾಗಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಣಯ ಅಂಗೀಕರಿಸಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular