ಬೆಂಗಳೂರು: ಬೆಂಗಳೂರಿಗರಿಗೆ ಖುಷಿ ಸುದ್ದಿ. ನಮ್ಮ ಮೆಟ್ರೋದ ಪಿಂಕ್ ಲೈನ್ ಗೆ ಮತ್ತೊಂದು ರೈಲು ಸೇರ್ಪಡೆಯಾಗಿದೆ.
ಎರಡನೇ ರೈಲು ಕೊತ್ತನೂರು ಡಿಪೋಗೆ ಆಗಮಿಸಿದ್ದು, ಏಪ್ರಿಲ್‌ನಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ. ಇದು ದಕ್ಷಿಣ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ.
ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಎರಡನೇ ರೈಲು ಆಗಮಿಸಿದ್ದು, ಅದರ ಬೋಗಿಗಳು ಕೊತ್ತನೂರು ಡಿಪೋಗೆ ತಲುಪಿವೆ. ಇದರಿಂದ ಪಿಂಕ್ ಲೈನ್ ಯೋಜನೆ ಮಹತ್ವದ ಹಂತ ತಲುಪಿದೆ ಎಂದು ಬಿಎಂಆರ್ ಸಿ ಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 21.26 ಕಿಲೋಮೀಟರ್ ಉದ್ದದ ಈ ಪಿಂಕ್ ಲೈನ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ವಿಭಾಗವಿದ್ದು, ಈ ಭಾಗದಲ್ಲಿ ಈಗಾಗಲೇ ಪರೀಕ್ಷಾ ಕಾರ್ಯಗಳು ಆರಂಭವಾಗಿವೆ. ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು ಆರು ಸ್ಟೇಷನ್‌ಗಳು ನಿರ್ಮಾಣವಾಗುತ್ತಿದ್ದು, ಪ್ರಯಾಣಿಕರ ಸುರಕ್ಷತೆ ಮತ್ತು ರೈಲಿನ ತಾಂತ್ರಿಕ ಗುಣಮಟ್ಟ ಪರಿಶೀಲನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭಿಸಲು ಬಿಎಂಆರ್‌ಸಿಎಲ್ ಸಿದ್ಧತೆ ನಡೆಸುತ್ತಿದೆ. ಈ ಮಾರ್ಗವನ್ನು ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ತೆರೆಯುವ ಸಾಧ್ಯತೆ ಇದೆ.
ಉಳಿದ 13.76 ಕಿಲೋಮೀಟರ್ ಅಂಡರ್‌ಗ್ರೌಂಡ್ ಮಾರ್ಗದ ಕಾಮಗಾರಿ ಚಾಲನೆಯಲ್ಲಿದ್ದು, ಎಲ್ಲಾ ಕೆಲಸಗಳು ಪೂರ್ಣಗೊಂಡ ಬಳಿಕ ವರ್ಷದ ಅಂತ್ಯಕ್ಕೆ ಸಂಪೂರ್ಣ ಪಿಂಕ್ ಲೈನ್ ಉದ್ಘಾಟಿಸುವ ಉದ್ದೇಶ ಬಿಎಂಆರ್‌ಸಿಎಲ್ ಹೊಂದಿದೆ.

