HomeLive NewsBREAKING: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಬಿಎಸ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

BREAKING: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಬಿಎಸ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ರಾಯಚೂರು: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ಸಿಂಧನೂರು ರೈಲ್ವೆ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ಸುಮಂಗಲ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ ಯುವತಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ಸುಮಂಗಲ ಇಂದು ಬೆಳಿಗ್ಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

Most Popular