HomeLatest Newsಗೃಹಲಕ್ಷ್ಮಿ ಯೋಜನೆ : ಮೃತ, ಸ್ಥಳಾಂತರವಾದ ಫಲಾನುಭವಿಗಳ ಪರಿಷ್ಕರಣೆಗೆ ಸೂಚನೆ.!

ಗೃಹಲಕ್ಷ್ಮಿ ಯೋಜನೆ : ಮೃತ, ಸ್ಥಳಾಂತರವಾದ ಫಲಾನುಭವಿಗಳ ಪರಿಷ್ಕರಣೆಗೆ ಸೂಚನೆ.!

ಧಾರವಾಡ  :  ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ 3,96,119 ಗೃಹ ಲಕ್ಷ್ಮಿ ಫಲಾನುಭವಿಗಳಿದ್ದು, ಮೃತ ಮತ್ತು ಸ್ಥಳಾಂತರವಾದ ಫಲಾನುಭವಿಗಳ ಕುರಿತು ಪ್ರತಿ ತಿಂಗಳು ನಿರಂತರ ಪರಿಷ್ಕರಣೆ ಮಾಡಬೇಕು. ಅರ್ಹರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿಸುವಲ್ಲಿ ಅಧಿಕಾರಿಗಳು ಶ್ರಮಿಸಬೇಕೆಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್.ಪಾಟೀಲ ಅವರು ಸೂಚಿಸಿದರು.

ಅವರು ಇಂದು (ಫೆ.04) ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಗೃಹಲಕ್ಷ್ಮಿ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಿದೆ. ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಗೆ ಬುನಾದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ರಾಜ್ಯ ಸರಕಾರವು ಬಿಪಿಎಲ್ ಮತ್ತು ಎಪಿಎಲ್ ಅಂತ್ಯೋದಯ ಕಾರ್ಡನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ಗಳ ಸಹಾಯಧನ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಗೃಹಲಕ್ಷ್ಮಿಯೋಜನೆ ಆರಂಭವಾದ ಆಗಸ್ಟ್ 2023 ರಿಂದ 24 ಕಂತುಗಳಲ್ಲಿ ಜಿಲ್ಲೆಯ ಗೃಹಲಕ್ಷ್ಮಿ ಫಲಾನುಭವಿಗಳಿಗೆ ರೂ. 1816.52 ಕೋಟಿ ಸಹಾಯಧನ ಜಮೆ ಆಗಿದೆ. ಇಲ್ಲಿಯವರೆಗೆ ಜಿಲ್ಲೆಯ ಶೇ.97.68 ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಆಗಿದ್ದಾರೆ ಎಂದು ಅವರು ತಿಳಿಸಿದರು.

ಯುವನಿಧಿ ಯೋಜನೆಯಲ್ಲಿ ಜಿಲ್ಲೆಯ ಪದವಿಧರ ನೋಂದಾಯಿತರಾಗಿದ್ದು, ಅವರಿಗೆ ಉದ್ಯೋಗ ಹೊಂದಲು ಸರಿಯಾದ ಕೌಶಲ್ಯ ತರಬೇತಿ, ಮಾರ್ಗದರ್ಶನ ನೀಡಬೇಕು. ಈಗ ಪದವಿ ಹಾಗೂ ಇತರ ಪರೀಕ್ಷೆಗಳು ಜರುಗಿದ್ದು, ಹೊಸ ಫಲಾನುಭವಿಗಳು ಯುವನಿಧಿ ಯೋಜನೆಗೆ ಒಳಪಡಲು ಆಸಕ್ತರಿದ್ದಾರೆ. ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಯುವನಿಧಿ ಯೋಜನೆಯ ಕ್ಯಾಂಪೆನ್ ಮಾಡಿ, ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.

ಗೃಹ ಜ್ಯೋತಿ, ಶಕ್ತಿ ಯೋಜನೆಗಳು ನಿಯಮಾನುಸಾರ ಅನುಷ್ಠಾನವಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮವಹಿಸಬೇಕು ಮತ್ತು ದೂರು ಬಂದ ತಕ್ಷಣ ಅದನ್ನು ಅಟೆಂಡ್ ಮಾಡಬೇಕೆಂದು ಅವರು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಅರ್ಹರಿಗೆ ಕಿಟ್ ವಿತರಿಸಬೇಕು ಮತ್ತು ನಿಯಮಾನುಸಾರ ಪಡಿತರ ವಿತರಿಸಬೇಕು. ಕೆಲವು ಪಡಿತದಾರರಿಗೆ ಸಮಯಕ್ಕೆ ಸರಿಯಾಗಿ ಪಡಿತರ ಸಿಗುತ್ತಿಲ್ಲವೆಂದು ದೂರು ಬರುತ್ತಿದ್ದು, ಸಂಬಂದಪಟ್ಟ ಸ್ಥಳಿಯ ಅಧಿಕಾರಿಗಳು, ಸ್ಥಳ ಭೇಟಿ ನೀಡಿ, ಪರಿಶೀಲಿಸಿ , ಸೂಕ್ತ ಪರಿಹಾರ ಸೂಚಿಸಬೇಕೆಂದು ಅಧ್ಯಕ್ಷ ಶ್ಯಾನಪ್ಪಗೌಡ ಪಾಟೀಲ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ವಿಳಂಬ ಮತ್ತು ಅನರ್ಹರಿಗೆ ತಲುಪಿಸಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರತಿ ಯೋಜನೆಯಡಿ ರೂಪಿಸಿರು ನಿಯಮಗಳನ್ನು ಪಾಲಿಸಿ, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಫಲಾನುಭವಿಗಳು ಸಲ್ಲಿಸುವ ದಾಖಲಾತಿಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ, ಮುಂದಿನ ಕ್ರಮವಹಿಸಬೇಕು ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆಗಳ ತಾಲೂಕು ಮತ್ತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಅಧಿಕೃತ ದಾಖಲೆ ಮತ್ತು ಮಾಹಿತಿ ಮಾತ್ರ ನೀಡಬೇಕು. ಸುಳ್ಳು, ಸಬುಬೂ ಹೇಳಿದರೆ ಸಹಿಸಲ್ಲ. ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಗ್ಯಾರಂಟಿ ಪ್ರಾಧಿಕಾರ ಮತ್ತು ಸಮಿತಿ ಸದಸ್ಯರು ಪ್ರಸ್ತಾಪಿಸುತ್ತಾರೆ. ಅವು ಮರುಕಳಿಸದಂತೆ ಎಚ್ಚರಿಕೆವಹಿಸಬೇಕೆಂದು ಅವರು ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular