HomeLatest Newsತೋಟಗಾರಿಕೆ, ಉನ್ನತ ಶಿಕ್ಷಣ, ಕಾರ್ಮಿಕ ಇಲಾಖೆ ಸೇರಿ ವಿವಿಧ ಇಲಾಖೆಗೆ ಅನುದಾನ: ಬಜೆಟ್ ಪೂರ್ವಭಾವಿ ಸಭೆಯಲ್ಲಿ...

ತೋಟಗಾರಿಕೆ, ಉನ್ನತ ಶಿಕ್ಷಣ, ಕಾರ್ಮಿಕ ಇಲಾಖೆ ಸೇರಿ ವಿವಿಧ ಇಲಾಖೆಗೆ ಅನುದಾನ: ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಚರ್ಚೆ

ಬೆಂಗಳೂರು: ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ ತೋಟಗಾರಿಕೆ, ಉನ್ನತ ಶಿಕ್ಷಣ, ಕಾರ್ಮಿಕ ಇಲಾಖೆ ಸೇರಿ ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆ ಕುರಿತಾಗಿ ಚರ್ಚೆ ನಡೆಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಬಜೆಟ್‌ ಪೂರ್ವಭಾವಿ ಸಭೆ ನಡೆಸಿ, ಮುಂದಿನ ಆರ್ಥಿಕ ವರ್ಷದಲ್ಲಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳು ಮತ್ತು ಅನುದಾನದ ಬೇಡಿಕೆಯ ಮಾಹಿತಿ ಪಡೆದಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಉನ್ನತ ಶಿಕ್ಷಣ ಇಲಾಖೆ ಸಚಿವ ಎಂ.ಸಿ.ಸುಧಾಕರ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರು ಆದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಮಿಕ ಹಾಗೂ ಒಳಾಡಳಿತ ಇಲಾಖೆಯ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ಜೊತೆ ಬಜೆಟ್‌ ಪೂರ್ವಭಾವಿ ಸಭೆ ನಡೆಸಿ, ಇಲಾಖೆಗಳ ಅನುದಾನದ ಬೇಡಿಕೆ ಮತ್ತು ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಮಾಹಿತಿ ಪಡೆದು, ಅಗತ್ಯ ಹಣಕಾಸಿನ ಬೆಂಬಲ ನೀಡುವುದಾಗಿ ಸಿಎಂ ತಿಳಿಸಿದ್ದಾರೆ.

2026-27ನೇ ಸಾಲಿನ‌ ಆಯವ್ಯಯದ ಪೂರ್ವಭಾವಿಯಾಗಿ ತೋಟಗಾರಿಕೆ ಮತ್ತು ಗಣಿ, ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ, ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಬಳಿಕ ಅನುದಾನ ಹಾಗೂ ಕಾರ್ಯಕ್ರಮಗಳ ಬೇಡಿಕೆಯನ್ನು ಆಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular