ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ನಾಗರೀಕ ಸೇವಾ ಪರೀಕ್ಷೆ 2026ಕ್ಕೆ ಅಧಿಸೂಚನೆ ಬಿಡುಗಡೆ ಮಾಡಿದೆ.
ಈ ವರ್ಷ ಒಟ್ಟು 933 ಹುದ್ದೆಗಳ ಭರ್ತಿ ಸಂಬಂಧ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಡಳಿತಾತ್ಮಕ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಫೆಬ್ರವರಿ 24ರ ವರೆಗೆ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ನಾಗರಿಕ ಸೇವಾ ಪರೀಕ್ಷೆ ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮುಖ್ಯ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ ಸಂದರ್ಶನ ಇರಲಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕ ಸೇರಿದಂತೆ ಇತರೆ ಮಾಹಿತಿಗಾಗಿ ಕೇಂದ್ರ ಲೋಕಸೇವಾ ಆಯೋಗದ ವೆಬ್ಸೈಟ್ upsc.gov.in ಗಮನಿಸಬಹುದಾಗಿದೆ.

