ಬೆಂಗಳೂರು: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ರವಿ ಡಿ. ಚನ್ನಣ್ಣನವರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಅಗ್ನಿಶಾಮಕ ದಳ ಇಲಾಖೆಯಿಂದ ರವಚನ್ನಣ್ಣನವರ್ ಅವರನ್ನು ಕಾರ್ಮಿಕ ಇಲಾಖೆಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿದೆ.
ರವಿ ಡಿ. ಚನ್ನಣ್ಣನವರ್, ಐಪಿಎಸ್(2009) ಪೊಲೀಸ್ ಉಪ ಮಹಾನಿರೀಕ್ಷಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಬೆಂಗಳೂರಿನ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಯನ್ನು, ಐಪಿಎಸ್ (ವೇತನ) ನಿಯಮಗಳು 2016 ರ ನಿಯಮ 12 ರ ಅಡಿಯಲ್ಲಿ, ಸದರಿ ನಿಯಮದ ವೇಳಾಪಟ್ಟಿ II ರಲ್ಲಿ ಸೇರಿಸಲಾಗಿರುವಂತೆ, ಅಪರಾಧ ತನಿಖಾ ಇಲಾಖೆಯ ಉಪ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಸ್ಥಾನಮಾನ ಮತ್ತು ಜವಾಬ್ದಾರಿಗಳಲ್ಲಿ ಸಮಾನವೆಂದು ಘೋಷಿಸಲಾಗಿದೆ.


