ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವಿದೇಶಿ ರಾಯಭಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯ ಎಸಗುವ ಬೆದರಿಕೆ ಕೇಳಿಬಂದಿದೆ. ನಗರದ ಆರ್.ಟಿ. ನಗರದ ಗಂಗಾನಗರದಲ್ಲಿರುವ ನೆದರ್ಲ್ಯಾಂಡ್ಸ್ ರಾಯಭಾರಿ ಕಚೇರಿಯನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ.
ಗಂಗಾನಗರದ ಬಳಿ ಇರುವ ನೆದರ್ಲ್ಯಾಂಡ್ಸ್ ರಾಯಭಾರಿ ಕಚೇರಿಯ ಅಧಿಕಾರಿಗಳಿಗೆ ಈ ಬೆದರಿಕೆ ಸಂದೇಶ ಬಂದಿದೆ. ಕಚೇರಿಯ ರಾಯಭಾರಿ ಭಾಸ್ಕರ್ ಸುಬ್ರಹ್ಮಣಿ ಎಂಬುವವರು ಈ ಸಂಬಂಧ ಪೊಲೀಸ್ ದೂರು ದಾಖಲಿಸಿದ್ದಾರೆ. ಕಿಡಿಗೇಡಿಗಳು ವಿದೇಶಿ ರಾಯಭಾರಿ ಕಚೇರಿಗಳನ್ನೇ ಟಾರ್ಗೆಟ್ ಮಾಡುತ್ತಿರುವುದು ಈ ಘಟನೆಯಿಂದ ಸ್ಪಷ್ಟವಾಗಿದೆ.
ಕಚೇರಿಯಲ್ಲಿ 5 ಆರ್.ಡಿ.ಎಕ್ಸ್ (RDX) ಮತ್ತು ಐಇಡಿ (IED) ಬಾಂಬ್ಗಳನ್ನು ಇಟ್ಟು ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಸಂದೇಶದಲ್ಲಿ ತಿಳಿಸಲಾಗಿದೆ.
ಪೊಲೀಸ್ ಕ್ರಮ
ದೂರಿನ ಅನ್ವಯ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬೆದರಿಕೆ ಹಾಕಿದ ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ., ಸೈಬರ್ ಕ್ರೈಂ ತಂಡದ ನೆರವಿನೊಂದಿಗೆ ಬೆದರಿಕೆ ಸಂದೇಶದ ಮೂಲವನ್ನು ಪತ್ತೆಹಚ್ಚಲಾಗುತ್ತಿದೆ.

