HomeLatest Newsಬೆಳಗಾವಿ ವಿಭಜನೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ ವಿಭಜನೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿಭಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯ ಶ್ರೀನಗರದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಜಿಲ್ಲಾ ಬಾಲಭವನದ ಒಳಾಂಗಣ ಬಾಕ್ಸ್ ಕ್ರಿಕೆಟ್ ಮೈದಾನವನ್ನು ಉದ್ಘಾಟಿಸಿ,ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ಜಿಲ್ಲೆಯನ್ನು ವಿಭಜಿಸಬೇಕೆಂದು ಈಗಾಗಲೇ ಹಲವು ಬಾರಿ ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಆದರೆ ಈ ಕುರಿತು ಸರ್ಕಾರ, ಸಿಎಂ ಸಿದ್ದರಾಮಯ್ಯನವರೇ ಅಂತಿಮ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಬಜೆಟ್ ಅನುದಾನ ಕಾಯಬೇಕಿಲ್ಲ, ಆಯಾ ಇಲಾಖೆಗಳಲ್ಲಿ ಲಭ್ಯ ಇರುವ ಅನುದಾನ ಬಳಸಿ ಅಭಿವೃದ್ಧಿ ವೇಗ ಹೆಚ್ಚಿಸಬಹುದು. ಟ್ರಾಫಿಕ್‌ ಸಮಸ್ಯೆ ಉದ್ಭವಿಸದಂತೆ ಬರುವ ದಿನಗಳಲ್ಲಿ ಅಶೋಕ ವೃತ್ತ, ಚನ್ನಮ್ಮಾ ವೃತ್ತ, ಕೊಲ್ಲಾಪುರ ವೃತ್ತವನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಮುಂಬರುವ ಗ್ರಾಪಂ ಚುನಾವಣೆಗಳಲ್ಲಿ ಬ್ಯಾಲೆಟ್‌ ಪೇಪರ್‌ ಬಳಸಬೇಕೆಂದು ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಹೇಳಿದರು.

ನವಿಲುತೀರ್ಥ ಜಲಾಶಯದಿಂದ ಅವಳಿ ನಗರಗಳಿಗೆ ನೀರು ಪೂರೈಸುವ ವಿಚಾರವಾಗಿ ಕುಡಿಯುವ ನೀರಿನ ಬೇಡಿಕೆಯನ್ನು ನಿರಾಕರಿಸಲು ಸಾಧ್ಯವಿಲ್ಲ, ಹಿಪ್ಪರಗಿ ಜಲಾಶಯದಲ್ಲಿ ಸದ್ಯಕ್ಕೆ ಅಗತ್ಯವಿರುವಷ್ಟು ನೀರು ಸಂಗ್ರಹವಿದೆ ಎಂದರು. ಸದ್ಯಕ್ಕೆ ಮಹಾರಾಷ್ಟ್ರದಿಂದ ನೀರು ಕೇಳುವ ಪರಿಸ್ಥಿತಿ ಇಲ್ಲದಿದ್ದರೂ, ಮುಂದಿನ ದಿನಗಳಲ್ಲಿ ಅವಶ್ಯಕತೆ ಬಿದ್ದಲ್ಲಿ ಪಕ್ಷಾತೀತವಾಗಿ ನೀರು ತರಲು ಶ್ರಮಿಸುವುದಾಗಿ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular