HomeLatest Newsವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಪ್ರವಾಸಿಗನ ಕೊಲೆ ಕೇಸ್: ಮೂವರು ದೋಷಿಗಳು ಎಂದು...

ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಪ್ರವಾಸಿಗನ ಕೊಲೆ ಕೇಸ್: ಮೂವರು ದೋಷಿಗಳು ಎಂದು ಘೋಷಿಸಿದ ನ್ಯಾಯಾಲಯ

ಕೊಪ್ಪಳ: ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳು ದೋಷಿಗಳು ಎಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಕಳೆದ ವರ್ಷ ಸಣಾಪುರ ಕಾಲುವೆ ದಂಡೆಯ ಸಮೀಪ ನಡೆದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ ಮತ್ತು ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ ಒಂಬತ್ತು ತಿಂಗಳ ಒಳಗೆ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 16ರಂದು ಪ್ರಕಟಿಸಲಿದೆ.

ಸಾಯಿ ನಗರದ ಮಲ್ಲೇಶ್, ಸಾಯಿ, ಶರಣಪ್ಪ ಎಂಬ ಮೂವರು ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಕಳೆದ ವರ್ಷ ಮಾರ್ಚ್ ನಲ್ಲಿ ಐವರು ಪ್ರವಾಸಿಗರ ತಂಡ ಸಣಾಪುರ ಕೆರೆ ದಂಡೆಯ ಬಳಿ ತೆರಳಿದ್ದ ವೇಳೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಈ ವೇಳೆ ಅಮೆರಿಕದ ಡೇನಿಯಲ್ ಸೇರಿದಂತೆ ಮೂವರು ಪ್ರವಾಸಿಗರನ್ನು ತುಂಗಭದ್ರಾ ಎಡದಂಡೆ ಕಾಲುವೆಗೆ ತಳ್ಳಿದ್ದರು. ಒಡಿಶಾ ಮೂಲದ ಬಿಬಾಸ್ ಎಂಬ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ. ಇಸ್ರೇಲ್ ಮೂಲದ ಮಹಿಳೆ ಹಾಗೂ ಸ್ಥಳೀಯ ಮಹಿಳೆಯೊಬ್ಬರ ಮೇಲೆ ಆರೋಪಿಗಳು ಅತ್ಯಾಚಾರ ಎಸಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular