ಚಿಕ್ಕಬಳ್ಳಾಪುರ: ಫೆಬ್ರವರಿ 14ರ ಪ್ರೇಮಿಗಳ ದಿನದಂದು ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ಪ್ರವೇಶ ಬಂದ್ ಮಾಡಲಾಗವುದು.
ಪ್ರೇಮಿಗಳ ಪಾಲಿನ ಸ್ವರ್ಗ ಎಂದೇ ಹೇಳಲಾಗುವ ನಂದಿಗಿರಿ ಧಾಮವನ್ನು ಫೆಬ್ರವರಿ 14ರ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಬಂದ್ ಮಾಡಲಿದ್ದು, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಪ್ರೇಮಿಗಳ ದಿನ ನಂದಿ ಗಿರಿಧಾಮಕ್ಕೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ. ಇದೇ ಫೆಬ್ರವರಿ 14ರಂದು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ. ಪ್ರಭು ಆದೇಶಿಸಿದ್ದಾರೆ.

