HomeLatest Newsಸಿದ್ಧರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾವಿರ ದಿನ ಪೂರೈಸಿದ ಹಿನ್ನೆಲೆ ಫೆ. 14 ಹಾವೇರಿಯಲ್ಲಿ ಸಾಧನಾ ಸಮಾವೇಶ

ಸಿದ್ಧರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾವಿರ ದಿನ ಪೂರೈಸಿದ ಹಿನ್ನೆಲೆ ಫೆ. 14 ಹಾವೇರಿಯಲ್ಲಿ ಸಾಧನಾ ಸಮಾವೇಶ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13 ರಂದು ಹಾವೇರಿಯಲ್ಲಿ ಆಯೋಜಿಸಿದ್ದ ಹಕ್ಕುಪತ್ರ ವಿತರಣಾ ಸಮಾವೇಶವನ್ನು ಫೆಬ್ರವರಿ 14ಕ್ಕೆ ಮುಂದೂಡಲಾಗಿದೆ.

ಸರ್ಕಾರದ ಸಾಧನಾ ಸಮಾವೇಶವನ್ನು ಫೆಬ್ರವರಿ 13 ರಂದು ನಡೆಸಲು ಯೋಜಿಸಲಾಗಿತ್ತು. ಅದೇ ದಿನ ಬೆಂಗಳೂರಿನಲ್ಲಿ ವರ್ಲ್ಡ್ ಡ್ಯಾಮ್ ಸೇಫ್ಟಿ ಡಿವಿಷನ್ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಉದ್ಘಾಟಿಸಲಿದ್ದಾರೆ. ಹೀಗಾಗಿ ಸಾಧನಾ ಸಮಾವೇಶವನ್ನು ಒಂದು ದಿನ ಮುಂದೂಡಲಾಗಿದೆ.

ಫೆಬ್ರವರಿ 14ರಂದು ಬೆಳಗ್ಗೆ 11 ಗಂಟೆಗೆ ಸಾಧನಾ ಸಮಾವೇಶ ನಡೆಯಲಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ದಾಖಲೆ ರಹಿತರಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮವನ್ನು ಸರ್ಕಾರ ಮಾಡಿದೆ. ಕಂದಾಯ ಇಲಾಖೆಯಿಂದ ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸಮಾವೇಶ ಆಯೋಜಿಸಲಾಗಿದ್ದು, 9 ಜಿಲ್ಲೆಗಳ ಒಟ್ಟು ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular