HomeLatest Newsಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹ: ಉಗ್ರಾಣದ ಮೇಲೆ ಅಧಿಕಾರಿಗಳ ದಾಳಿ: 4000 ಕ್ಕೂ ಅಧಿಕ ಚೀಲ...

ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹ: ಉಗ್ರಾಣದ ಮೇಲೆ ಅಧಿಕಾರಿಗಳ ದಾಳಿ: 4000 ಕ್ಕೂ ಅಧಿಕ ಚೀಲ ಯೂರಿಯಾ ಜಪ್ತಿ

ಬಳ್ಳಾರಿ: ಅಕ್ರಮವಾಗಿ ಯೂರಿಯಾ ಸಂಗ್ರಹಿಸಿದ್ದ ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 4000ಕ್ಕೂ ಅಧಿಕ ಚೀಲ ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿಯ ಇಂಡಸ್ಟ್ರಿಯಲ್ ಏರಿಯಾದ ಗೋಡೌನ್‌ ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಲಾಗಿದೆ ಎಂಬ ಬಗ್ಗೆ ಖಚಿತ ಮಾಹಿತಿ ಆಧಾರಾದಲ್ಲಿ ದಾಳಿ ನಡೆಸಿದ ಅಧಿಕಾರಿಗಳು,. 4000ಕ್ಕೂ ಹೆಚ್ಚು ಚೀಲ ಯೂರಿಯಾ ವಶಪಡಿಸಿಕೊಂಡಿದ್ದಾರೆ. ರೈತರಿಗೆ ತಲುಪಬೇಕಾದ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಡ್ವಿನ್ ಎಂಬುವವರ ಮಾಲೀಕತ್ವದ ಗೋಡೌನ್‌ನಲ್ಲಿ ರೈತರಿಗೆ ವಿತರಿಸಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ, ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ತಂತ್ರ ನಡೆದಿತ್ತು. ದಾಳಿ ವೇಳೆ ಗೋಡೌನ್ ಮಾಲೀಕನನ್ನು ವಶಕ್ಕೆ ಪಡೆಯಲಾಗಿದೆ.

ಜೂನ್ ತಿಂಗಳ ಮುಂಗಾರು ವೇಳೆ ಯೂರಿಯಾ ಗೊಬ್ಬರಕ್ಕೆ ಭಾರೀ ಬೇಡಿಕೆ ಉಂಟಾಗುವ ಸಾಧ್ಯತೆ ಇರುವುದರಿಂದ, ಈಗಿನಿಂದಲೇ ಅಕ್ರಮವಾಗಿ ಯೂರಿಯಾ ಸಂಗ್ರಹಿಸಿಡಲಾಗಿತ್ತು ಎನ್ನಲಾಗಿದೆ. ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular